ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಮ್ಯಾಗ್ನೆಟ್ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಪೋಷಕರು ಹಾಗೂ ಸಾರ್ವಜನಿಕರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಎಐಡಿಎಸ್ಓ ರಾಜ್ಯ ಸಂಘಟಕಿ ತುಳಸಿ, ರಾಜ್ಯ ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಹೆಸರಲ್ಲಿ ರೈತರು, ಕಾರ್ಮಿಕರರ ಮಕ್ಕಳಿಂದ ಶಿಕ್ಷಣವು ದೂರ ಸರಿಯುವಂತೆ ಮಾಡುತ್ತಿದೆ ಎಂದು ದೂರಿದರು.

ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಜೊತೆಗೆ ಇದೀಗ ಪಿ.ಎಂ.ಶ್ರೀ ಶಾಲೆಗಳು ಕೂಡ ಸುತ್ತಲಿನ ಶಾಲೆಗಳನ್ನು ವಿಲೀನಗೊಳಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಸರ್ಕಾರ ಪಿ.ಎಂ. ಶ್ರೀ ಯೋಜನೆಯ ಹೆಸರಿನಲ್ಲಿ ರಾಜ್ಯದಾದ್ಯಂತ 317 ಶಾಲೆಗಳನ್ನು ವಿಲೀನ ಮಾಡಿಸಲು ಆದೇಶ ಹೊರಡಿಸಿದೆ. ಪಿಯು ಕಾಲೇಜುಗಳನ್ನು ಕೂಡ ವಿಲೀನಗೊಳಿಸುವ ಮೂಲಕ ಸರ್ಕಾರಿ ಶಾಲಾ ಕಾಲೇಜುಗಳನ್ನು ಮುಚ್ಚುವ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಶಿಕ್ಷಣಕ್ಕೆ 8 ಗ್ಯಾರಂಟಿಗಳನ್ನು ನೀಡಿ ದೇಶದಲ್ಲೇ ಮಾದರಿ ಶಾಲಾ ವ್ಯವಸ್ಥೆ ನಿರ್ಮಿಸುತ್ತೇವೆ ಎಂದು ಹೇಳುತ್ತಿದೆ. ಆದರೆ ವಾಸ್ತವದಲ್ಲಿ ಈ ಗ್ಯಾರಂಟಿಗಳು ಮೋಸದಿಂದ ಕೂಡಿವೆ. ಸರ್ಕಾರಿ ಶಾಲೆಗಳನ್ನು ಮುಚ್ಚುವ ಅಂಶವನ್ನು ನಯವಾಗಿ ತಳ್ಳಿ ಹಾಕುತ್ತಾ ಗ್ಯಾರಂಟಿಗಳ ಮುಖವಾಡದಲ್ಲಿ ನಾಡಿನ ಜನತೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಮೋಸ ಮಾಡುತ್ತಿದೆ ಎಂದರು.

ಪ್ರತಿಭಟನೆ ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಶಂಕರಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪರಮೇಶ್, ಚೌಡರಾಜ್, ಸಾರ್ವಜನಿಕ ಹೋರಾಟ ಸಮಿತಿ ಸದಸ್ಯೆ ಟಿ.ಸಿ.ರಮಾ, ಐಶ್ವರ್ಯ, ಸಿಂಧು, ಬಾಬು, ಕಿರಣ್, ಎಐಡಿಎಸ್ ಜಿಲ್ಲಾ ಕಾರ್ಯದರ್ಶಿ ವಿ.ಕಲ್ಯಾಣಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-15-945465325

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.