ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಪೌರಾಯುಕ್ತ, ಕಂದಾಯ ಅಧಿಕಾರಿ ಅಮಾನತು

ಅನಧಿಕೃತ ನಿವೇಶನಗಳಿಗೆ ಇ-–ಸ್ವತ್ತು ಪ್ರಕರಣ
Last Updated 7 ಜನವರಿ 2023, 22:10 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅನುಮೋದನೆ ಪಡೆಯದೇ ನಿವೇಶನಗಳಿಗೆ ಇ-ಸ್ವತ್ತು ಮಾಡಿಕೊಟ್ಟಿರುವ ಆರೋಪದ ಮೇಲೆ ಈ ಹಿಂದೆ ದೊಡ್ಡಬಳ್ಳಾಪುರ ನಗರಸಭೆ ಪೌರಾಯುಕ್ತರಾಗಿದ್ದ ಹಾಗೂ ಪ್ರಸ್ತುತ ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ರಮೇಶ್ ಎಸ್. ಸುಣಗಾರ ಹಾಗೂ ಇಲ್ಲಿನ ನಗರಸಭೆ ಕಂದಾಯ ಅಧಿಕಾರಿ ರವೀಂದ್ರ ಬಿ.ಜಾಯಗೊಂಡೆ ಅವರನ್ನು ಅಮಾನತು ಮಾಡಲಾಗಿದೆ.

ಪೌರಾಡಳಿತ ಇಲಾಖೆ ನಿರ್ದೇಶಕಿ ಎನ್‌.ಮಂಜುಶ್ರೀ ಅವರು ಇಬ್ಬರೂ ಅಧಿಕಾರಿಗಳನ್ನು ಅಮಾನತುಗೊಳಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.

ದೊಡ್ಡಬಳ್ಳಾಪುರ ನಗರಸಭೆಯ ನಗರಸಭೆ 11ನೇ ವಾರ್ಡ್‌ ಕರೇನಹಳ್ಳಿ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆಯ 39 ನಿವೇಶನಗಳಿಗೆ ಇ-ಸ್ವತ್ತು ಮಾಡಿಕೊಟ್ಟಿರುವ ಆರೋಪ ಈ ಇಬ್ಬರೂ ಅಧಿಕಾರಿಗಳ ಮೇಲಿತ್ತು. ಈ ಬಡಾವಣೆಗೆ ನಗರ ಯೋಜನಾ ಪ್ರಾಧಿಕಾರದ ಅನುಮೋದನೆ ಪಡೆದಿರಲಿಲ್ಲ.

ಪೌರಾಡಳಿತ ನಿರ್ದೇಶನಾಲಯ ಹಾಗೂ ಸರ್ಕಾರದ ಸುತ್ತೋಲೆ ಅನುಸಾರ ಖಾತೆಗಳನ್ನು ರದ್ದುಪಡಿಸಲು ಕ್ರಮ ವಹಿಸದೇ 39 ನಿವೇಶನಗಳ ಆಸ್ತಿಯ ಹಕ್ಕನ್ನು ಪೌವತಿ ಖಾತೆಗಳನ್ನು ಮಾಡಿಕೊಟ್ಟಿರುವ ಬಗ್ಗೆ ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತುಗೊಳಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪೌರಾಡಳಿತ ಇಲಾಖೆಗೆ ಪತ್ರ ಬರೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT