ದೊಡ್ಡಬಳ್ಳಾಪುರ: ನಗರಸಭೆಗೆ 2026-27ನೇ ಸಾಲಿನ ಆಸ್ತಿ ತೆರಿಗೆ, ನೀರಿನ ಶುಲ್ಕ ಮುಂಗಡ ಪಾವತಿಗೆ ಶೇ 5 ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ಮೇ 31ರವರೆಗೂ ವಿಸ್ತರಿಸಿ ಪೌರಾಡಳಿತ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕ ಮುನಿಸಿಪಾಲಿಟೀಸ್ ಅಧಿನಿಯಮ 1964ರ ಪ್ರಕಾರ ಹೊರಡಿಸಲಾಗಿದ್ದು,ನಾಗರಿಕರು ನಿಗದಿತ ಅವಧಿಯೊಳಗೆ ಆಸ್ತಿ ತೆರಿಗೆಯನ್ನು ಪಾವತಿಸಿದರೆ ಈ ರಿಯಾಯಿತಿ ದೊರೆಯಲಿದೆ. ಈ ಅವಧಿ ಏಪ್ರಿಲ್ 30ಕ್ಕೆ ಅಂತ್ಯವಾಗಿತ್ತು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಎಲ್ಲಾ ತೆರಿಗೆದಾರರು ಈ ಸೌಲಭ್ಯವನ್ನು ಪಡೆಯಬಹುದಾಗಿದೆ. 2026-27ನೇ ಸಾಲಿನ ತೆರಿಗೆ ಪಾವತಿಯನ್ನು ಮುಂಗಡವಾಗಿ ಪಾವತಿ ಮಾಡುವ ಮೂಲಕ ನಾಗರಿಕರು ಆರ್ಥಿಕವಾಗಿ ಪ್ರಯೋಜನ ಪಡೆಯಬಹುದಾಗಿದೆ.

ಅವಧಿ ವಿಸ್ತರಣೆಯಿಂದ ತೆರಿಗೆ ಸಂಗ್ರಹಣೆಯನ್ನು ಸುಗಮಗೊಳಿಸುವುದರ ಜೊತೆಗೆ, ನಾಗರಿಕರನ್ನು ಮುಂಗಡ ಪಾವತಿಗೆ ಉತ್ತೇಜಿಸಲು ಸಹಕಾರಿಯಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-15-674675141

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.