ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ವಾಹನ ಡಿಕ್ಕಿ- ಪಾದಚಾರಿ ಸಾವು

Published 17 ಜನವರಿ 2024, 16:00 IST
Last Updated 17 ಜನವರಿ 2024, 16:00 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ನಗರದ ಬಸವ ಭವನ ಸಮೀಪದ ಡೇರಿ ಮುಂಭಾಗ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ.

ನಗರದ ರಾಜೀವ್‌ಗಾಂಧಿ ಬಡಾವಣೆ 2ನೇ ಹಂತದ ಗಂಗಧಾರಪುರ ನಿವಾಸಿ ಶಿವಶಂಕರಪ್ಪ(54 ) ಮೃತರು.

ಶಿವಶಂಕರಪ್ಪ ಯಲಹಂಕದ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದು, ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಬಯೋಮೆಟ್ರಿಕ್‌ ನೀಡಲು ಯಲಹಂಕದಿಂದ ನಗರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬಸ್ ಇಳಿದು ಮನೆಗೆ ನಡೆದುಕೊಂಡು ಹೋಗುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತ ನಡೆಸಿರುವ ವಾಹನ ಇನ್ನೂ ಪತ್ತೆಯಾಗಿಲ್ಲ. ಅಪಘಾತಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT