ದೊಡ್ಡಬಳ್ಳಾಪುರ: ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ, ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಭಿನ್ನ ಸಾಧನೆ ಮಾಡಿರುವ ರೈತ ಮತ್ತು ರೈತ ಮಹಿಳೆಯರಿಂದ 2023-24 ನೇ ಸಾಲಿನ ‘ಕೃಷಿ ಪಂಡಿತ’ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 24 ಕೊನೆ ದಿನ. ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು, ಸ್ಪರ್ಧಿಸಲು ಅರ್ಹತೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆಯ ಆಯಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳ ಅಧಿಕಾರಿಗಳನ್ನು ಅಥವಾ ದೊಡ್ಡಬಳ್ಳಾಪುರ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕಿ ಡಿ.ರಾಜೇಶ್ವರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳೆ ಸ್ಪರ್ಧೆ: 2023-24ನೇ ಸಾಲಿನ ಕೃಷಿ ಪ್ರಶಸ್ತಿಯಡಿ ಬೆಳೆ ಸ್ಪರ್ಧೆಗೆ ಆಸಕ್ತ ಪುರುಷ ಹಾಗೂ ರೈತ ಮಹಿಳೆಯರನ್ನು ಪ್ರೋತ್ಸಾಹಿಸಲು ‘ಕೃಷಿ ಪ್ರಶಸ್ತಿ’ಗೆ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು ಮುಂಗಾರು ಹಂಗಾಮಿಗೆ ಆಗಸ್ಟ್ 31 ಕೊನೆಯ ದಿನ.

ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ:

ಕೃಷಿ ಇಲಾಖೆಯಲ್ಲಿ 2023-24ನೇ ಸಾಲಿನ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ‘ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ’ ಅರ್ಜಿ ಆಹ್ವಾನಿಸಲಾಗಿದೆ.

‘ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ ಸ್ಪರ್ಧೆಯಲ್ಲಿ ತಾಲ್ಲೂಕಿನಾದ್ಯಂತ ಸಮಗ್ರ ಕೃಷಿ, ಸಾವಯವ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಮತ್ತು ರೇಷ್ಮೆ ವಿಭಾಗದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಹಾಗೂ ನೂತನ ತಾಂತ್ರಿಕತೆಗಳನ್ನು ಕೃಷಿಯಲ್ಲಿ ಅಳವಡಿಸಿಕೊಂಡಿರುವ ರೈತರು ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಕನಿಷ್ಠ ಒಂದು ಎಕರೆ ಜಮೀನನ್ನು ಹೊಂದಿರಬೇಕು. ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಜಾತಿ ಪ್ರಮಾಣ ಪತ್ರ ಮತ್ತು ತಾಂತ್ರಿಕತೆಗಳನ್ನು ಅಳವಡಿಸಿಕೊಂಡಿರುವ ಭಾವಚಿತ್ರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ‘ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ’ ಅರ್ಜಿ ಸಲ್ಲಿಸಲು ಕೊನೆಯ ಆಗಸ್ಟ್ 5. ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.