ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಟೆಂಟ್‌ ತೆರವಿಗೆ ಸೂಚನೆ

ದೊಡ್ಡಬಳ್ಳಾಪುರ: ಅಧಿಕಾರಿಗಳ ಸಭೆಯಲ್ಲಿ ಜಗದೀಶ್ ಹಿರೇಮನಿ ಸೂಚನೆ
Last Updated 11 ಮಾರ್ಚ್ 2020, 23:19 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಂಎಸ್‌ಜಿಪಿ ಕಸ ವಿಲೇವಾರಿ ಘಟಕದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ಟೆಂಟ್‌ ಹಾಗೂ ಗುಡಿಸಲುಗಳನ್ನು ಗುರುವಾರ ಮಧ್ಯಾಹ್ನದ ವೇಳೆಗೆ ತೆರವುಗೊಳಿಸಿ ವರದಿ ನೀಡುವಂತೆ ತಾಲ್ಲೂಕು ಆಡಳಿತಕ್ಕೆ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಜಗದೀಶ್ ಹಿರೇಮನಿ ಸೂಚನೆ ನೀಡಿದರು.

ಬುಧವಾರ ಚಿಗರೇನಹಳ್ಳಿ ಸಮೀಪದ ಎಂಎಸ್‌ಜಿಪಿ ಕಸ ವಿಲೇವಾರಿ ಘಟಕದ ಸ್ಥಳ ಪರಿಶೀಲನೆ ನಂತರ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ‘ಮಾನವ ಕಳ್ಳ ಸಾಗಾಣಿಕೆ, ಸರ್ಕಾರಿ ಭೂಮಿ ಅಕ್ರಮ ಬಳಕೆ, ಬಿಬಿಎಂಪಿ ಒಪ್ಪಂದದ ನಿಯಮ ಹಾಗೂ ಕಾರ್ಮಿಕ ಕಾನೂನುಗಳ ಉಲ್ಲಂಘನೆಗಳ ಅಡಿಯಲ್ಲಿ ಎಂಎಸ್‌ಜಿಪಿ ಮಾಲೀಕ, ವ್ಯವಸ್ಥಾಪಕ ಹಾಗೂ ಕೂಲಿ ಕಾರ್ಮಿಕರನ್ನು ಕೊಲ್ಕತ್ತದಿಂದ ಇಲ್ಲಿಗೆ ಕರೆತರುತ್ತಿ
ರುವ ಗುತ್ತಿಗೆದಾರನ ವಿರುದ್ದ ಎಫ್‌ಐಆರ್‌ ದಾಖಲಿಸಿ ಆಯೋಗಕ್ಕೆ ವರದಿ ನೀಡಬೇಕು’ ಎಂದರು.

*
ಇಲ್ಲಿ ಅಕ್ರಮವಾಗಿ ಬಾಂಗ್ಲಾದೇಶದಿಂದ ನುಸುಳಿರುವ ಉಗ್ರರು ಇರುವ ಶಂಕೆ ಇದೆ. ಇಲ್ಲಿನ ಟೆಂಟ್‌ಗಳಲ್ಲಿರುವವರ ದಾಖಲೆಗಳನ್ನು ಪರಿಶೀಲಿಸಬೇಕು.
-ಜಗದೀಶ್ ಹಿರೇಮನಿ, ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT