ದೊಡ್ಡಬಳ್ಳಾಪುರ: ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಒಪ್ಪದ ತಮ್ಮ ಮೇಲೆ ನೆಲಮಂಗಲ ತಾಲ್ಲೂಕಿನ ಅರೆಬೊಮ್ಮನಹಳ್ಳಿ ಗ್ರಾಮ ಪಂಚಾಯತಿ ಸದಸ್ಯರು ಹಲ್ಲೆ ನಡೆಸಿದ್ದಾರೆ ಎಂದು ಅಧ್ಯಕ್ಷ ರಂಗಸ್ವಾಮಿ ಸೋಮವಾರ ಪೊಲೀಸರಿಗೆ ದೂರು ನೀಡಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಸದಸ್ಯ ಶೈಲೇಂದ್ರ ಹಾಗೂ ಇತರ ಎಂಟು ಸದಸ್ಯರು ತಮ್ಮನ್ನು ದೊಡ್ಡಬಳ್ಳಾಪುರ ತಾಲ್ಲೂಕು ಉಪ ವಿಭಾಗಾಧಿಕಾರಿಗಳ ಕಚೇರಿಗೆ ಕರೆದುಕೊಂಡು ಬಂದಿದ್ದರು.

ಈ ವೇಳೆ ರಾಜೀನಾಮೆ ನೀಡಲು ಒಪ್ಪದಿದ್ದಾಗ ತಳ್ಳಾಟ, ನೂಕಾಟ ನಡೆಸಿ ತಮ್ಮ ಬಟ್ಟೆ ಹರಿದು, ಹಲ್ಲೆ ನಡೆಸಿದರು ಎಂದು ರಂಗಸ್ವಾಮಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಂಗಸ್ವಾಮಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.