ದೊಡ್ಡಬಳ್ಳಾಪುರ: ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವತಿಯಿಂದ ಬೀದಿಬದಿ ವ್ಯಾಪಾರಿಗಳಿಗೆ ಪಿ.ಎಂ ಸ್ವನಿಧಿ ಯೋಜನೆ ಕುರಿತು ಅರಿವು ಕಾರ್ಯಕ್ರಮ ನಡೆಯಿತು.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ್ ಕುಮಾರ್ ಮಾತನಾಡಿ, ಪಿ.ಎಂ ಸ್ವನಿಧಿ ಯೋಜನೆಯು ಕೇಂದ್ರ ಸರ್ಕಾರ ಬೀದಿಬದಿ ವ್ಯಾಪಾರಿಗಳಿಗೆ ಆರಂಭಿಸಿದ ಕಿರುಸಾಲ ಯೋಜನೆಯಾಗಿದೆ. ಯಾವುದೇ ಮೇಲಾಧಾರವಿಲ್ಲದೆ ವ್ಯಾಪಾರ ಬಂಡವಾಳಕ್ಕಾಗಿ ಸುಲಭವಾಗಿ ಸಾಲವನ್ನು ಒದಗಿಸುತ್ತದೆ ಎಂದರು.

2020 ಜೂ.1ರಂದು ಪ್ರಾರಂಭಿಸಿದ ಪಿ.ಎಂ ಸ್ವನಿಧಿ ಯೋಜನೆಯು ಬೀದಿಬದಿ ವ್ಯಾಪಾರಿಗಳಿಗೆ ತಮ್ಮ ವ್ಯವಹಾರ ಪುನರಾರಂಭಿಸಲು, ಅನೌಪಚಾರಿಕ ಸಾಲಗಳ ಮೇಲಿನ ಅವಲಂಬನೆ ಕಡಿಮೆ ಮಾಡಲು ಆರ್ಥಿಕ ಯೋಗಕ್ಷೇಮ ಸುಧಾರಿಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಿ.ಎಂ ಸ್ವನಿಧಿ ಯೋಜನೆಯ ಬಗ್ಗೆ ಅರಿವು ನೀಡಲಾಯಿತು. ಬೀದಿಬದಿ ವ್ಯಾಪಾರಿಗಳಿಗೆ ನೀಡಲಾಗುವ ಸಾಲ ಸೌಲಭ್ಯ ಹಾಗೂ ಕ್ರೆಡಿಟ್ ಕಾರ್ಡ್ ಬಗ್ಗೆ ಮಾಹಿತಿ ನೀಡಲಾಯಿತು.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಶ್ವೇತ ಮುರಳಿಧರ್, ಮುಖ್ಯಾಧಿಕಾರಿ ಅಮರನಾಥ್, ಸಮುದಾಯ ಸಂಘಟನ ಅಧಿಕಾರಿ ವೈ.ಎಂ.ರೂಪ, ಎಸ್.ಬಿ.ಐ, ಇಂಡಿಯನ್ ಓವರ್ಸಿಸ್ ಬ್ಯಾಂಕ್, ಎಚ್.ಡಿ.ಎಫ್.ಸಿ ಬ್ಯಾಂಕ್ ವ್ಯವಸ್ಥಾಪಕ, ಸ್ವಸಹಾಯ ಸಂಘದ ಸದಸ್ಯರು, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಬೀದಿಬದಿ ವ್ಯಾಪಾರಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-15-143214052

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.