ದೊಡ್ಡಬಳ್ಳಾಪುರ: ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆ ಅಂಗವಾಗಿ ಭಯೋತ್ಪಾದನಾ ನಿರ್ಮೂಲನ ಪ್ರಮಾಣವಚನ ಸ್ವೀಕರಿಸಲಾಯಿತು.

ಡಿವೈಎಸ್ಪಿ ಪಾಂಡುರಂಗ, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಎಂ.ಬಿ.ನವೀನ್ಕುಮಾರ್ ಪ್ರಮಾಣ ವಚನ ಬೋಧಿಸಿದರು.

ಭಯೋತ್ಪಾದನೆ ದೇಶದ ಪ್ರಗತಿಗೆ ಮಾರಕವಾಗಿದೆ. ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ 1991ರ ಮೇ 21ರಂದು ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದರು. ಅವರ ತ್ಯಾಗವನ್ನು ಸ್ಮರಿಸಲು ಮತ್ತು ಭಯೋತ್ಪಾದನೆ ವಿರುದ್ಧ ದೇಶವನ್ನು ಒಗ್ಗೂಡಿಸಲು ಈ ದಿನವನ್ನು ಭಯೋತ್ಪಾದನಾ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತದೆ. ಯುವಜನರಲ್ಲಿ ಭಯೋತ್ಪಾದನೆಯ ಅಪಾಯಗಳು, ಹಿಂಸಾಚಾರದ ಪರಿಣಾಮಗಳು ಮತ್ತು ದೇಶದಲ್ಲಿ ಶಾಂತಿ, ಏಕತೆಯನ್ನು ಉತ್ತೇಜಿಸುವ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ ಎಂದು ಡಿವೈಎಸ್ಪಿ ಪಾಂಡುರಂಗ ತಿಳಿಸಿದರು.

ಸಬ್ಇನ್ಸ್ಪೆಕ್ಟರ್ ಶ್ರೀದೇವಿ, ಎಎಸ್ಐ ಮತ್ತು ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-15-1458356176

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.