ದೊಡ್ಡಬಳ್ಳಾಪುರ: ಪೌರಸೇವಾ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘ ಕರೆ ನೀಡಿರುವ ಅನಿರ್ಧಿಷ್ಟಾವದಿ ಮುಷ್ಕರ ಬೆಂಬಲಿಸಿ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಂದೆ ಶುಕ್ರವಾರ ಪೌರಾಸೇವಾ ನೌಕರರು ಮುಷ್ಕರ ಆರಂಭಿಸಿದ್ದಾರೆ.

ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಹಲವಾರು ಬೇಡಿಕೆಗಳು ದಶಕಗಳಿಂದ ಬಾಕಿ ಉಳಿದಿವೆ. ಹಲವು ಬಾರಿ ಮನವಿ ಮಾಡಿದರೂ ಬೇಡಿಕೆಗಳನ್ನು ಈವರೆಗೂ ಈಡೇರಿಸಿಲ್ಲ. ಹೀಗಾಗಿ ಮುಷ್ಕರ ಆರಂಭಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯ ಎಲ್ಲಾ ಶಾಖೆಗಳಲ್ಲಿನ ಕಾರ್ಯಗಳನ್ನು ಸ್ಥಗಿತಗೊಳಿಸಲು ಹಾಗೂ ನಗರದ ಸ್ವಚ್ಛತ ಕಾರ್ಯವನ್ನು ಸ್ಥಗಿತಗೊಳಿಸಿ ಅನಿರ್ಧಿರ್ನಿಷ್ಟಾವದಿ ಮುಷ್ಕರ ಪ್ರಾರಂಭಿಸಲಾಗುತ್ತಿದೆ. ಜೂನ್ 2 ರಿಂದ ನೀರು ಸರಬರಾಜು ಸಹ ಸ್ಥಗಿತಗೊಳಿಸಿ ಮುಷ್ಕರ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ಜಿಲ್ಲಾಧ್ಯಕ್ಷ ಪಿ.ಪಾಂಡುಸಿಂಧೆ ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತುಗಳನ್ನು ಪೌರಸೇವಾ ನೌಕರರಿಗೆ ಪ್ರತ್ಯೇಕ ಆದೇಶವಿಲ್ಲದೇ ವಿಸ್ತರಿಸಬೇಕು. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿನಗೂಲಿ, ಕ್ಷೇಮಾಭಿವೃದ್ಧಿ ಅಧಿನಿಯಮದಡಿ ಇರುವ ನೌಕರರನ್ನು ಸಕ್ರಮಾತಿಗೊಳಿಸಬೇಕು. ನಗರಸಭೆಗಳಲ್ಲಿ ಶೇ 100 ರಷ್ಟು ಪೌರಕಾರ್ಮಿಕರನ್ನು ವಿಶೇಷ ನೇಮಕಾತಿದಡಿ ನೇಮಕಾತಿ ಮಾಡಬೇಕು ಎಂದು ಒತ್ತಾಯಿಸಿದರು.

2022ನೇ ಸಾಲಿನ ವಿಶೇಷ ನೇಮಕಾತಿಯಡಿ ಆಯ್ಕೆಯಾದ ಪೌರಕಾರ್ಮಿಕರು, ರೋಡರ್ಸ್ಗಳಿಗೆ ಎಸ್ಎಫ್ಸಿ ವೇತನ ನಿಧಿಯಿಂದ ವೇತನ ಪಾವತಿಸಬೇಕು. ನಗರ ಸ್ಥಳೀಯ ನೌಕರರಿಗೆ ಜ್ಯೋತಿ ಸಂಜೀವಿನಿ, ನಗದು ರಹಿತ ಚಿಕಿತ್ಸಾ ಸೌಲಭ್ಯ ಕಲ್ಪಿಸಬೇಕು. ಐಟಿ ಸಿಬ್ಬಂದಿ, ಅಕೌಂಟ್ ಕನ್ಸಲ್ಟೆಂಟ್, ಕಂಪ್ಯೂಟರ್ ಆಪರೇಟರ್, ವಾಹನ ಚಾಲಕ, ಸ್ಯಾನಿಟರಿ ಸೂಪರ್ ವೈಜರ್ ಹಾಗೂ ಇತರೆ ವೃಂದದ ನೌಕರರನ್ನು ಪೌರಸೇವಾ ನೌಕರರೆಂದು ಪರಿಗಣಿಸಿ ವಿಲೀನಗೊಳಿಸಬೇಕು ಎನ್ನುವ ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗಿದೆ ಎಂದರು.

ಪೌರ ಕಾರ್ಮಿಕರ ಸಂಘದ ಶಾಖಾ ಖಜಾಂಚಿ ವೆಂಕಟೇಶ್ ಬಾಬು, ಶಾಖಾ ಕಾರ್ಯದರ್ಶಿ ಜೆ.ಸಿ.ಪಿ.ಮಂಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.