ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರದಲ್ಲಿ ರಾಮ ಮಂದಿರದ ಪ್ರತಿಕೃತಿ

Published 22 ಜನವರಿ 2024, 7:57 IST
Last Updated 22 ಜನವರಿ 2024, 7:57 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಶ್ರೀರಾಮ ಉತ್ಸವ ಆಚರಣ ಸಮಿತಿ ನಗರದ ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ಅಯೋಧ್ಯೆ ರಾಮ ಮಂದಿರದ ಬೃಹತ್‌ ಪ್ರತಿಕೃತಿ ನಿರ್ಮಿಸಿದೆ. 

ತಮಿಳುನಾಡಿನ ಕಲಾವಿದರು ಬೊಂಬು, ಕಬ್ಬಿಣದ ಚೌಕಟ್ಟು (ಫ್ರೇಮ್‌) ಬಳಸಿ ಈ ಪ್ರತಿಕೃತಿ ನಿರ್ಮಿಸಿದ್ದಾರೆ. ಅಯೋಧ್ಯೆಯ ಮೂಲ ರಾಮ ಮಂದಿರವನ್ನೇ ಹೋಲುವ ಪ್ರತಿಕೃತಿಯನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮಗಳ ನೂರಾರು ಜನರು ಬರುತ್ತಿದ್ದಾರೆ. ರಾತ್ರಿ ಹೊತ್ತು ವಿದ್ಯುತ್‌ ದೀಪಗಳಿಂದ ಕಂಗೊಳಿಸುತ್ತಿದ್ದು ಎಲ್ಲರ ಗಮನ ಸೆಳೆಯುತ್ತಿದೆ. 

ಒಳಗಡೆ ವಿಶಾಲವಾದ ವೇದಿಕೆ ನಿರ್ಮಿಸಲಾಗಿದ್ದು, ರಾಮ ಮಂದಿರ ಉದ್ಘಾಟನಾ ಸಮಾರಂಭದ ನೇರಪ್ರಸಾರ ವೀಕ್ಷಣೆಗೆ ಬೃಹತ್‌ ಪರದೆ ಅಳವಡಿಸಲಾಗಿದೆ. ವೇದಿಕೆಯ ಮುಂಭಾಗದಲ್ಲಿ ಹೋಮಕ್ಕಾಗಿ ಕುಂಡಗಳನ್ನು ನಿರ್ಮಿಸಲಾಗಿದೆ. 500 ಜನರು ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ ಎಂದು ಸಮಿತಿಯ ಸಹ ಸಂಚಾಲಕ ಬಂತಿ ವೆಂಕಟೇಶ್‌ ತಿಳಿಸಿದ್ದಾರೆ. 

ದೊಡ್ಡಬಳ್ಳಾಪುರದ ಭಗತ್‌ ಸಿಂಗ್‌ ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿರುವ ಅಯೋಧ್ಯೆಯ ರಾಮ ಮಂದಿರದ ಬೃಹತ್ ಪ್ರತಿಕೃತಿ
ದೊಡ್ಡಬಳ್ಳಾಪುರದ ಭಗತ್‌ ಸಿಂಗ್‌ ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿರುವ ಅಯೋಧ್ಯೆಯ ರಾಮ ಮಂದಿರದ ಬೃಹತ್ ಪ್ರತಿಕೃತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT