ದೊಡ್ಡಬಳ್ಳಾಪುರ: ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಖಂಡಿಸಿ ಮೇ 25 ರಂದು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಕರುನಾಡು ರಾಷ್ಟ್ರೀಯ ಸೇನೆ ರಾಜ್ಯ ಅಧ್ಯಕ್ಷ ಬಿ. ಶಿವಶಂಕರ್ ಹೇಳಿದರು.

ತಾಲ್ಲೂಕಿನ ಮೇಲಿನನಾಯಕರಂಡಳ್ಳಿಯ ಸರ್ವೇ ನಂ.17ರಲ್ಲಿ ಸುಮಾರು 85ಕ್ಕೂ ಹೆಚ್ಚಿನ ಬಡ ಕುಟುಂಬದ ರೈತರಿಗೆ ಜಮೀನು ಮಂಜೂರಾಗಿದ್ದು, ರಸ್ತೆಗಾಗಿ ಸರ್ಕಾರಿ ಕಚೇರಿಗಳಿಗೆ ಎರಡು ವರ್ಷಗಳಿಂದ ಅಲೆಯುತ್ತಿದ್ದರೂ ಜಿಲ್ಲಾಧಿಕಾರಿಗಳ ಕಚೇರಿಯಿಂದ ಕೆಲಸ ಆಗಿಲ್ಲ. ಹೀಗಾಗಿ ಪ್ರತಿಭಟನೆ ನಡೆಸಲಾಗುತ್ತಿದೆ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

ಸುಮಾರು 30 ವರ್ಷಗಳಿಂದ ವ್ಯವಸಾಯ ಮಾಡಿ ಜೀವನ ಸಾಗಿಸುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಮೇಲಿನನಾಯಕರಂಡಳ್ಳಿ ಗ್ರಾಮದ ರೈತರನ್ನು ಏಕಾಏಕಿ ಖಾಸಗಿ ವ್ಯಕ್ತಿಗಳು ನಕಲಿ ದಾಖಲೆಗಳನ್ನು ಸೃಷ್ಠಿಸಿಕೊಂಡು ಬಂದು ಒಕ್ಕಲೆಬ್ಬಿಸುತ್ತಿದ್ದಾರೆ. ರೈತರ ಜೀವನಕ್ಕೆ ಆಧಾರವಾಗಿರುವ ಉಳುಮೆ ಭೂಮಿಯನ್ನು ಕಿತ್ತುಕೊಳ್ಳಲು ಕೆಲ ಪ್ರಭಾವಿಗಳ ಕುಮ್ಮಕ್ಕು ಇದೆ. ತಾಲ್ಲೂಕಿನ ಕೆಲ ಕಂದಾಯ ಇಲಾಖೆಯಲ್ಲಿನ ನೌಕರರೆ ತಮ್ಮ ಸಂಬಂಧಿಗಳ ಹೆಸರಿಗೆ ಇಲ್ಲಿನ ಜಮೀನು ಮಂಜೂರು ಮಾಡಿಸುತ್ತಿದ್ದಾರೆ. ಹಾಗಾಗಿ ಈ ಭೂಮಿ ಉಳಿಸಿಕೊಡುವಂತೆ ತಾಲ್ಲೂಕು ಆಡಳಿತಕ್ಕೆ ಮನವಿ ಮಾಡಿದರು ಸಹ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ತಾಲ್ಲೂಕಿನಲ್ಲಿ ಹಲವಾರು ಸಾರ್ವಜನಿಕ ಭೂಮಿಗಳನ್ನು ಭೂಗಳ್ಳರು ಕಬಳಿಸುತ್ತಿದ್ದಾರೆ. ಇಲ್ಲಸಲ್ಲದ ನೆಪ ಹೇಳಿಕೊಂಡು ಭೂಮಿ ವಶಪಡಿಸಿಕೊಳ್ಳುತ್ತಿದ್ದಾರೆ. ಸಾರ್ವಜನಿಕ ಸ್ವತ್ತನ್ನು ಉಳಿಸುವಂತೆ ಹಲವು ಬಾರಿ ಮನವಿ ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರೂ ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.

ಕರುನಾಡು ರಾಷ್ಟ್ರೀಯ ಸೇನೆ ರಾಜ್ಯ ಉಪಾಧ್ಯಕ್ಷ ಗಂಗಿರೆಡ್ಡಿ, ರಾಜ್ಯ ನಿರ್ದೇಶಕಿ ಚಂದ್ರಿಕಾ, ರಾಜ್ಯ ಖಜಾಂಚಿ ಕುಮಾರ್, ಮೇಲಿನನಾಯಕರಂಡಳ್ಳಿ ಗ್ರಾಮದ ಮುಖಂಡರಾದ ಉಮೇಶ್,ಶ್ರೀನಿವಾಸ್, ಮಂಜುನಾಥ್, ಗಂಗಾಧರ್, ಸುರೇಶ್, ರಾಮಾಂಜಿನಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-15-1365674696

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.