ಸಾಸಲು(ದೊಡ್ಡಬಳ್ಳಾಪುರ): ಸಂಸ್ಕೃತಿ ಮತ್ತು ಪರಂಪರೆ ಉಳಿಸಿ, ಬೆಳೆಸಲು ಸಾಂಸ್ಕೃತಿಕ ಉತ್ಸವ ಸಹಕಾರಿಯಾಗಲಿದೆ ಎಂದು ಜಾನಪದ ವಿದ್ವಾಂಸ ಸಣ್ಣ ನಾಗಪ್ಪ ಹೇಳಿದರು.

ತಾಲ್ಲೂಕಿನ ಸಾಸಲು ಹೋಬಳಿ ಕೇಂದ್ರದಲ್ಲಿ ಭಾನುವಾರ ನಡೆದ ಸಾಸಲು ಚಿನ್ನಮ್ಮ ಉತ್ಸವ ಉದ್ಘಾಟಿಸಿ ಮಾತನಾಡಿದರು.

ಸಾಸಲು ಚಿನ್ನಮ್ಮ ಮಹಾಸಾಧ್ವಿ ಮತ್ತು ಮಹಿಳಾ ಶಕ್ತಿಯ ಜೀವಂತ ಸಂಕೇತವಾಗಿದ್ದಾರೆ. ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿಭಾಗದ ಜನಪದ ಪರಂಪರೆಯಲ್ಲಿ ಅವರ ಜೀವನ ಕುರಿತು ಸಾಕಷ್ಟು ಸಾಹಿತ್ಯ ಕಂಡು ಬರುತ್ತದೆ. ಕನ್ನಡ ಸಾಹಿತ್ಯದಲ್ಲಿ ಬರುವ ದಾನ ಚಿಂತಾಮಣಿ ಅತ್ತಿಮಬ್ಬೆಯಂತೆ ಸಾಸಲು ಚಿನ್ನಮ್ಮ ಸಹ ಕೆರೆ, ಬಾವಿಗಳನ್ನು ಕಟ್ಟಿಸುವ ಮೂಲಕ ಜನೋಪಕಾರಿ ಕಾರ್ಯಗಳನ್ನು ಮಾಡಿದ್ದಾರೆ ಎಂದರು.

ಅವರ ಕುರಿತು ಹಲವು ಪವಾಡಗಳನ್ನು ಜನಪದ ಕಥೆಗಾರರು ಹೇಳುತ್ತಾರೆ. ಅವರ ಕುರಿತು ಜನಪದ ಸಾಹಿತ್ಯದಲ್ಲಿ ಕಥೆ, ಕಾವ್ಯ, ನಾಟಕಗಳಿವೆ. ಸಾಸಲು ಸೇರಿದಂತೆ ತುಮಕೂರು ಜಿಲ್ಲೆಯ ಪಾವಗಡ, ಆಂಧ್ರಪ್ರದೇಶದ ಅನಂತಪುರ ಮುಂತಾದ ಕಡೆ ಅವರ ಕುರಿತ ಜನಪದ ಸಾಹಿತ್ಯ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದೆ. ಅವರ ಹೆಸರಿನಲ್ಲಿ ನಿರ್ಮಾಣವಾಗಿರುವ ಕೆರೆಗಳು, ಬಾವಿಗಳು, ದೇವಾಲಯಗಳು ಅವರ ಸಮಾಜಮುಖಿ ಕಾರ್ಯಗಳಿಗೆ ಸಾಕ್ಷಿಯಾಗಿದೆ ಎಂದರು.

ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಮಹಿಳೆಯರನ್ನು ಗೌರವಿಸುವುದು ಸಂಸ್ಕೃತಿ ಮತ್ತು ನಾಗರಿಕತೆ ಸಂಕೇತವಾಗಿದೆ. ಮಹಿಳೆಯರಿಗೆ ಸಮಾನ ಅವಕಾಶ ನೀಡಿ ಅವರ ಸಾಧನೆ ಪ್ರೋತ್ಸಾಹಿಸುವ ಮೂಲಕ ಸಮಾಜದಲ್ಲಿ ಮಹಿಳೆಯರಿಗೆ ಗೌರವಯುತ ಸ್ಥಾನ ಕಲ್ಪಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ, ಟಿಎಪಿಎಂಸಿಎಸ್ ಅಧ್ಯಕ್ಷ ಡಿ.ಸಿದ್ದರಾಮಯ್ಯ, ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ವಿಶ್ವನಾಥರೆಡ್ಡಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಅಶ್ವತ್ಥನಾರಾಯಣಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಸಾಸಲು ಚಿನ್ನಮ್ಮ ಉತ್ಸವ ಸಮಿತಿ ಪದಾಧಿಕಾರಿಗಳಾದ ನರಸಿಂಹಗೌಡ, ಶ್ರೀನಿವಾಸ್, ಲಾವಣ್ಯ ನಾಗರಾಜ್, ರವಿಕುಮಾರ್, ಲೋಕೇಶ್, ರಮೇಶ್, ನರಸಿಂಹಮೂರ್ತಿ, ಚಂದ್ರಶೇಖರ್, ನರೇಂದ್ರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-15-1762833201

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.