ದೊಡ್ಡಬಳ್ಳಾಪುರ: ಸಾಸಲು ಹೋಬಳಿ ಚಿನ್ನಮ್ಮ ಉತ್ಸವ ಸಮಿತಿ ಇದೇ ಮೊದಲ ಬಾರಿಗೆ ತಾಲ್ಲೂಕಿನ ಸಾಸಲು ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢ ಶಾಲಾ ಆವರಣದಲ್ಲಿ ಏ.19 ರಂದು ಸಾಸಲು ಚಿನ್ನಮ್ಮ ಉತ್ಸವ ಆಯೋಜಿಸಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ.ಡಿ.ಕೆ.ಚಿತ್ತಯ್ಯ ಪೂಜಾರ್ ಉತ್ಸವ ಉದ್ಘಾಟಿಸಲಿದ್ದಾರೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಉತ್ಸವ ಸಮಿತಿಯ ಲಾವಣ್ಯ ನಾಗರಾಜ್ ಮಾಹಿತಿ ನೀಡಿದರು.

ಭಾನುವಾರ ಬೆಳಗ್ಗೆ 8ಕ್ಕೆ ಸಾದ್ವಿಮಣಿ ಸಾಸಲು ಚಿನ್ನಮ್ಮ ದೇವಾಲಯ ಮುಂಭಾಗದಿಂದ ಡಾ.ಬಿ.ಆರ್. ಅಂಬೇಡ್ಕರ್ ಪ್ರೌಢ ಶಾಲಾ ಆವರಣದ ವೇದಿಕೆಯವರೆಗೆ ಸಾಸಲು ಚಿನ್ನಮ್ಮ ಮೂರ್ತಿ ಚಿಲಕಲ ಬಂಡಿ ಹಾಗೂ ಜಾನಪದ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಯಲಿದೆ.

ಮುಖ್ಯ ವೇದಿಕೆಯಲ್ಲಿ ಜಾನಪದ ವಿದ್ವಾಂಸರಾದ ಸಣ್ಣ ನಾಗಪ್ಪ ಅವರಿಂದ ಸಾಸಲು ಚಿನ್ನಮ್ಮ ಪರಿಚಯದ ಕಿರುಪುಸ್ತಕ ಬಿಡುಗಡೆ ನಡೆಯಲಿದೆ.ಶಾಸಕ ಧೀರಾಜ್ ಮುನಿರಾಜು, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಜೆಡಿಎಸ್ನ ಬಿ.ಮುನೇಗೌಡ ಭಾಗವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಪಿ.ಗೋವಿಂದರಾಜು ಅಧ್ಯಕ್ಷತೆ ವಹಿಸಲಿದ್ದಾರೆ.

ಮಧ್ಯಾಹ್ನ 12ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಸಾಸಲು ಹೋಬಳಿ ಕುರಿತು ಚಿಂತನ, ಮಂಥನ ವಿಚಾರಗೋಷ್ಠಿ, ಸಂಜೆ 7 ಕ್ಕೆ ಸಾಸಲು ಚಿನ್ನಮ್ಮ ಕುರಿತ ನಾಟಕ ನಡೆಯಲಿದೆ ಎಂದರು.

ಕಸಾಪ ಗೌರವ ಕಾರ್ಯದರ್ಶಿ ಎ.ಜಯರಾಮ್, ಕಸಾಪ ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು, ಉತ್ಸವ ಸಮಿತಿಯ ವಕೀಲ ನರಸಿಂಹಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಗ್ರಾಮ ಪಂಚಾಯಿತಿ ಸದಸ್ಯ ಪಚ್ಚಾರ್ಲಹಳ್ಳಿ ರಮೇಶ್, ಉಪನ್ಯಾಸಕ ಕೇಶವಮೂರ್ತಿ, ಚಂದ್ರಶೇಖರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-15-1572338183

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.