ದೊಡ್ಡಬಳ್ಳಾಪುರ: ನಗರದಲ್ಲಿ ಭಾನುವಾರ ನಡೆಯಲಿರುವ ಶೋಭಾಯಾತ್ರೆಯಲ್ಲಿ ಪ್ರತಿ ವರ್ಷದಂತೆ ಧ್ವನಿ ವರ್ಧಕ ಬಳಸುವ ಮೂಲಕವೇ ಅದ್ದೂರಿಯಾಗಿ ಶೋಭಾಯಾತ್ರೆ ನಡೆಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ತಿಳಿಸಿದ್ದಾರೆ. ಆದರೆ ಡಿಜೆ ಬಳಕೆಗೆ ಅನುಮತಿ ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಶೋಭಾಯಾತ್ರೆಯಲ್ಲಿ ಡಿಜೆ ಸೌಂಡ್ಸ್ ಬಳಸುವುದನ್ನು ನಿಷೇಧಿಸಿ ಪೊಲೀಸರು ಹೊರಡಿಸಿರುವ ಆದೇಶ ಖಂಡಿಸಿ ಶನಿವಾರ ಮಧ್ಯಾಹ್ನ 3 ಗಂಟೆಯಿಂದಲು ನಗರ ಪೊಲೀಸ್ ಠಾಣೆ ಮುಂದೆ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ಶ್ರೀರಾಮ ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ನಗರ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಪಾಂಡುರಂಗ ಅವರ ಸಮ್ಮುಖದಲ್ಲಿ ಶಾಸಕ ಧೀರಜ್ ಮುನಿರಾಜು ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರ ಸಭೆಯಲ್ಲಿ ‘ಡಿಜೆ ಬಳಸದೆ ಶೋಭಾಯಾತ್ರೆಯಲ್ಲಿ ಧ್ವನಿ ವರ್ಧಕಗಳನ್ನು ಮಾತ್ರ ಬಳಸಬೇಕು’ ಎಂದು ಪೊಲೀಸರು ತಿಳಿಸಿದರು.

ಸಭೆಯ ನಂತರ ಮಾಹಿತಿ ನೀಡಿದ ಶಾಸಕ ಧೀರಜ್ ಮುನಿರಾಜು ‘ಪ್ರತಿ ವರ್ಷದಂತೆ ಶಾಂತಿಯುತವಾಗಿ ಶೋಭಾಯಾತ್ರೆ ನಡೆಸಲಾಗುವುದು. ಇದಕ್ಕೆ ಎಲ್ಲರ ಸಹಕಾರ ಅಗತ್ಯ’ ಎಂದಷ್ಟೇ ಹೇಳಿದರು. ಆದರೆ ಡಿಜೆ ಬಗ್ಗೆ ಯಾವುದನ್ನು ಸ್ಪಷ್ಟವಾಗಿ ಹೇಳಲಿಲ್ಲ.

ಭಾನುವಾರ ಬೆಳಗ್ಗೆ 11.30ಕ್ಕೆ ಭಗತ್ಸಿಂಗ್ ಕ್ರೀಡಾಂಗಣದಿಂದ ಹಿಂದಿನ ವರ್ಷದಂತೆಯೇ ಶೋಭಾಯಾತ್ರೆಯಲ್ಲಿ ಧ್ವನಿ ವರ್ಧಕ ಸೇರಿದಂತೆ ಎಲ್ಲವು ಇರಲಿವೆ. ಮೆರವಣಿಗೆಯಲ್ಲಿ ಭಾರತ ಮಾತೆ, ಶ್ರೀರಾಮ, ಹನುಮ, ಶಿವ, ಅಂಬೇಡ್ಕರ್, ಇಮ್ಮಡಿ ಪುಲಿಕೇಶಿ ಪ್ರತಿಮೆಗಳೊಂದಿಗೆ ವಿವಿಧ ಕಲಾತಂಡಗಳು ಭಾಗವಹಿಸಲಿವೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಕೋಲಾರ ವಿಭಾಗದ ಸಹ ಕಾರ್ಯದರ್ಶಿ ರವಿಕುಮಾರ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-15-38709165

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.