ಸಾಸಲು(ದೊಡ್ಡಬಳ್ಳಾಪುರ): ಬಿಸಿಲ ಬೇಗೆಯ ನಡುವೆ ಶುಕ್ರವಾರ ರಾತ್ರಿ ತಾಲ್ಲೂಕಿನ ಸಾಸಲು ಹೋಬಳಿಯ ವಿವಿಧೆಡೆ ಕೆಲ ಕಾಲ ಮಳೆ ಸುರಿದು ತಂಪಾಯಿದಾರೂ, ಧಗೆ ತೀವ್ರವಾಗಿದೆ.

ಇದೇ ವೇಳೆ ತೀವ್ರ ಗಾಳಿ, ಸಿಡಿಲಿನಿಂದ ಕೂಡಿದ ಮಳೆ ಕೆಲವೆಡೆ ಮುಂಗಾರು ಪೂರ್ವದಲ್ಲಿ ನೀರಾವರಿಯಲ್ಲಿ ಬೆಳೆಯಾಲಾಗಿದ್ದ ರಾಗಿ ಬೆಳೆ ನೆಲಕಚ್ಚಿದೆ. ಗಾಳಿ ಮಳೆಯ ಕಾರಣ ಈ ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಶುಕ್ರವಾರ ರಾತ್ರಿ ವಿದ್ಯುತ್ ಪೂರೈಕೆ ಸ್ಥಗಿತವಾಗಿತ್ತು.

ಸಿಡಿಲು ಬಡಿದು ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೊಣ್ಣೇನಹಳ್ಳಿ ಗ್ರಾಮದ ಶನಿಮಹಾತ್ಮ ಸ್ವಾಮಿ ದೇವಾಲಯದ ಅರ್ಚಕ ರಾಜಪ್ಪ ಅವರ ಮನೆಯ ಮೇಲ್ಛಾವಣಿ ಸಿಮೆಂಟ್ ಶೀಟ್ಗಳು ಹಾರಿಹೋಗಿವೆ. ಶುಕ್ರವಾರ ಸಂಜೆ 7.30ರ ಸುಮಾರಿಗೆ ಸಿಡಿಲು ಬಡಿದಿದ್ದು, ಅದೃಷ್ಟವಶಾತ್ ಯಾವುದೆ ಪ್ರಾಣಪಾಯ ಸಂಭವಿಸಿಲ್ಲ. ಮನೆಗೆ ಹೊದಿಸಿದ್ದ ಸಿಮೆಂಟ್ ಶೀಟುಗಳು ಹಾಗೂ ಗೋಡೆಗೆ ಹಾನಿಯಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-15-431278140

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.