ದೊಡ್ಡಬಳ್ಳಾಪುರ: ಶಿಕ್ಷಕರು ದೇಶದ ಅಭಿವೃದ್ಧಿಯ ಚಿಂತನೆ ಹೊಂದುವುದರೊಂದಿಗೆ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ರೂಪಿಸಬೇಕಿದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯಿಂದ ಶನಿವಾರ ನಡೆದ ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರ ಜನ್ಮ ದಿನಾಚರಣೆ ಹಾಗೂ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭ್ರಷ್ಟಾಚಾರದ ಕೆಡಕುಗಳ ಬಗ್ಗೆ ಸಮಾಜಕ್ಕೆ ಅರಿವು ಮೂಡಿಸಬೇಕಿದೆ. ಕಾನೂನಿನ ಬಗ್ಗೆ ಇಂದಿನ ಮಕ್ಕಳಿಗೆ ತಿಳಿಸಬೇಕಿದೆ. ಸಮಾಜಮುಖಿ ಚಿಂತನೆ ದೇಶಪ್ರೇಮಕ್ಕೆ ಸರ್ವಪಲ್ಲಿ ರಾಧಾಕೃಷ್ಣನ್ ಅವರು ಮಾದರಿಯಾಗಿದ್ದು, ಇಂತಹ ಮಹಾಮಹಿಮರ ಆದರ್ಶ ಪ್ರೇರಣೆಯಾಗಬೇಕು. 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಪೂರಕವಾಗಿ ಆ್ಯಪ್ ತಯಾರು ಮಾಡಲಾಗಿದ್ದು, ಇದರ ಸದುಪಯೋಗ ಪಡೆಯಬೇಕಿದೆ ಎಂದರು.

ನವೆಂಬರ್ 14ರಂದು ಮಕ್ಕಳ ದಿನಾಚರಣೆಯನ್ನು ನಗರದ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ನಡೆಸಲು ಚಿಂತನೆ ನಡೆಸಿದ್ದು, ಶಿಕ್ಷಕರು ಈ ಕಾರ್ಯಕ್ರಮದ ನೇತೃತ್ವ ವಹಿಸಬೇಕು ಎಂದರು.

ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಹನುಮಂತರಾಯಪ್ಪ, ಸರ್ಕಾರಿ ಶಾಲೆಗಳಲ್ಲಿ ಕಟ್ಟಡ, ಶಿಕ್ಷಕರ ಕೊರತೆ ಮೊದಲಾದ ಸಮಸ್ಯೆಗಳಿದ್ದರೂ ಶಿಕ್ಷಕರು ತಮ್ಮ ಕಾರ್ಯಕ್ಕೆ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಓದಿರುವ ಮಕ್ಕಳು ಐಎಎಸ್, ಕೆಎಎಸ್ ಸೇರಿದಂತೆ ಉನ್ನತ ಅಧಿಕಾರಿಗಳಾಗಿ ರೂಪುಗೊಂಡಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ 2024-25ನೇ ಸಾಲಿನಲ್ಲಿ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಲಾಯಿತು.

ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ನಗರಸಭೆ ಉಪಾಧ್ಯಕ್ಷ ಎಂ.ಮಲ್ಲೇಶ್, ಭಾರತ ಸೇವಾ ದಳದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಲಕ್ಷ್ಮೀಪತಿ, ಕೇಂದ್ರ ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ (ಆಡಳಿತ) ಪಿ.ಬೈಲಾಂಜಿನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್. ಶಂಕರಯ್ಯ, ಸಮನ್ವಯಾಧಿಕಾರಿ ಜಿ.ಆರ್.ಹನುಮಂತರಾಯಪ್ಪ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಎಸ್.ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಧನಂಜಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ವಾಸದೇವಮೂರ್ತಿ, ತಾಲ್ಲೂಕು ಅಧ್ಯಕ್ಷ ಬಸವಲಿಂಗಯ್ಯ, ಕಾರ್ಯದರ್ಶಿ ಎ.ವಿ.ಚಂದ್ರಪ್ಪ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಆರ್.ಶಿವಕುಮಾರ್, ಕಾರ್ಯದರ್ಶಿ ಸಿದ್ದಲಿಂಗಸ್ವಾಮಿ, ನಿವೃತ್ತ ಅಧಿಕಾರಿ ಪದ್ಮರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.