ಪ್ರಜಾವಾಣಿ ವಾರ್ತೆ

ದೊಡ್ಡಬಳ್ಳಾಪುರ (ಬೆಂ.ಗ್ರಾಮಾಂತರ): ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಅವೈಜ್ಞಾನಿಕವಾಗಿ ಮನೆಗಳ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ಶಿಕ್ಷಕರು ಬುಧವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡಸಿದರು. ಇದರಿಂದಾಗಿ ತಾಲ್ಲೂಕಿನಲ್ಲಿ ಸಮೀಕ್ಷೆ ಆರಂಭವಾಗಲಿಲ್ಲ.

ಸಮೀಕ್ಷೆಗೆ ನಿಯೋಜಿಸಲಾಗಿರುವ ಶಿಕ್ಷಕರಿಗೆ ವೈಜ್ಞಾನಿಕವಾಗಿ ಮನೆಗಳನ್ನು ಹಂಚಿಕೆ ಮಾಡಬೇಕು. ನಿಯಮಾನುಸಾರ ಇತರ ಇಲಾಖೆಗಳ ನೌಕರರನ್ನೂ ಸಮೀಕ್ಷೆಗೆ ನಿಯೋಜಿಸಬೇಕು ಎಂದು ವಿವಿಧ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಒತ್ತಾಯಿಸಿದರು. ಪ್ರತಿಭಟನೆ ಬಳಿಕ ಉಪವಿಭಾಗಾಧಿಕಾರಿ ಎನ್. ದುರ್ಗಾಶ್ರೀ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಶಿಕ್ಷಕರನ್ನು ಅವರಿರುವ ಸ್ಥಳದಿಂದ 3 ಕಿ.ಮೀ ವ್ಯಾಪ್ತಿಯಲ್ಲಿ ಸಮೀಕ್ಷೆಗೆ ನಿಯೋಜಿಸಬೇಕು. ಆದರೆ, 20 ರಿಂದ 30 ಕಿ.ಮೀ ದೂರದ ಸಾಸಲು ಆರೂಢಿಯ ಶಿಕ್ಷಕರನ್ನು ಸಮೀಕ್ಷೆಗೆ ನಿಯೋಜಿಸಲಾಗಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 48 ಇಲಾಖೆಯ ಇತರ ನೌಕರರನ್ನು ಸಹ ಸಮೀಕ್ಷೆ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ. ಇದರಂತೆ ನಮ್ಮ ತಾಲ್ಲೂಕಿನ 24 ಇಲಾಖೆಗಳ ಸಿ.ದರ್ಜೆ ನೌಕರರನ್ನು ಸಮೀಕ್ಷೆ ಕಾರ್ಯಕ್ಕೆ ಬಳಸಿಕೊಳ್ಳಬೇಕು ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಎಸ್.ರಾಜಶೇಖರ್ ಒತ್ತಾಯಿಸಿದರು.

ಈ ನಡುವೆ ಗರ್ಭಿಣಿ, ಬಾಣಂತಿಯರು ಸೇರಿದಂತೆ ಆರೋಗ್ಯದ ಸಮಸ್ಯೆ ಇರುವವರಿಗೆ ಸಮೀಕ್ಷೆ ಕಾರ್ಯದಿಂದ ವಿನಾಯಿತಿ ನೀಡಬೇಕು ಎಂದು ಮನವಿಮಾಡಿರು.

ಸಮೀಕ್ಷೆ ಕಾರ್ಯದಲ್ಲಿ ಗೊಂದಲಗಳಾಗಿರುವುದು ಗಮನಕ್ಕೆ ಬಂದಿದೆ. ಇದನ್ನು ಸರಿಪಡಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಉಪವಿಭಾಗಾಧಿಕಾರಿ ಎನ್.ದುರ್ಗಾಶ್ರೀ ಭರವಸೆ ನೀಡಿದರು.

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಧನಂಜಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಜೈಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಬಸವಲಿಂಗಯ್ಯ, ಕಾರ್ಯದರ್ಶಿ ಎ.ವಿ.ಚಂದ್ರಪ್ಪ, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್.ಸಿದ್ದಗಂಗಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.