ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ತಾಲ್ಲೂಕು ಘಟಕದ 16 ನಿರ್ದೇಶಕರ ಆಯ್ಕೆಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಭಾನುವಾರ 24 ಮಂದಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾ ಅಧಿಕಾರಿ ಮಧು ತಿಳಿಸಿದ್ದಾರೆ.

16 ಸ್ಥಾನ ಪೈಕಿ 11 ಸಾಮಾನ್ಯ ಸ್ಥಾನಕ್ಕೆ 18, ಐದು ಮಹಿಳಾ ಮೀಸಲು ಸ್ಥಾನಕ್ಕೆ ಆರು ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 14ರ ಸಂಜೆ 6 ಗಂಟೆವರೆಗೂ ಅವಕಾಶ ಇರುತ್ತದೆ.

ತಾಲ್ಲೂಕಿನಲ್ಲಿ ಪ್ರಾಥಮಿಕ ಶಾಲೆಗಳ ಒಟ್ಟು 756 ಜನ ಮತದಾರರಿದ್ದು, ಏಪ್ರಿಲ್ 19 ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ(ಪ್ರೌಢ ಶಾಲಾ ವಿಭಾಗ) ಬೆಳಗ್ಗೆ 8.30 ರಿಂದ ಸಂಜೆ 4.30ರವರೆಗೆ ಮತದಾನ ನಡೆಯಲಿದೆ. ಸಂಜೆ 6.30ಕ್ಕೆ ಮತಗಳ ಎಣಿಕೆ ನಡೆಯಲಿದೆ.

ಸಾಮೂಹಿಕ ಶಿಕ್ಷಕರ ತಂಡದಿಂದ 11 ಪುರುಷರು, ಐವರು ಮಹಿಳಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ವಸಂತಗೌಡ ಶಿಕ್ಷಕ ವೇದಿಕೆಯಿಂದ ಎಂಟು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-15-1711882898

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.