ದೊಡ್ಡಬಳ್ಳಾಪುರ: ಮಹಿಳೆಯರು ಮತ್ತು ಹೆಣ್ಣು ಮಕ್ಕಳ ರಕ್ಷಣೆ ಸರ್ಕಾರ ಹಲವು ಕಾನೂನುಗಳನ್ನು ಜಾರಿಗೆ ತಂದಿದ್ದು, ಅವುಗಳ ಅರಿವು ಪ್ರತಿಯೊಬ್ಬರಿಗೂ ಇರಬೇಕೆಂದು ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ ಹೇಳಿದರು.

ನಗರದ ಮಹಿಳಾ ಸಮಾಜ ಕಸ್ತೂರಿ ಬಾ ಶಿಶು ವಿಹಾರ ವತಿಯಿಂದ ನಡೆದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದಾರೆ. ಆದರೆ ಕೆಲಸದ ಸಮಯದಲ್ಲಿ ಮಹಿಳೆಯರು, ಶಾಲಾ ಕಾಲೇಜುಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನಡೆಯುತ್ತಿರುವುದು ಕಂಡು ಬರುತ್ತದೆ. ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರಿಗೆ ಸುರಕ್ಷತೆ ಒದಗಿಸಲು ಭಾರತದಲ್ಲಿ ಪ್ರಮುಖ ಕಾನೂನುಗಳಿವೆ. ಅವುಗಳನ್ನು ತಿಳಿದುಕೊಂಡು, ಕಷ್ಟ ಕಾಲದಲ್ಲಿ ಅಸ್ತ್ರವಾಗಿ ಬಳಸಬೇಕೆಂದು ಸಲಹೆ ನೀಡಿದರು.

ದೈಹಿಕ, ಲೈಂಗಿಕ, ಆರ್ಥಿಕ ಮತ್ತು ಭಾವನಾತ್ಮಕ ಕಿರುಕುಳದಿಂದ ರಕ್ಷಣೆ ನೀಡುತ್ತದೆ.ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ಕುಟುಂಬದೊಳಗೆ ನಡೆಯುವ ದೌರ್ಜನ್ಯ, ವರದಕ್ಷಿಣೆ ಕಿರುಕುಳದ ವಿರುದ್ಧ ರಕ್ಷಣೆ ಮತ್ತು ಆರ್ಥಿಕ ಪರಿಹಾರ ಒದಗಿಸುತ್ತದೆ ಎಂದರು.

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಪೋಕ್ಸೋ ಕಾಯ್ದೆ ಪರಿಣಾಮಕಾರಿಯಾಗಿದೆ. ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಕಾನೂನು ನೆರವು, ತಾತ್ಕಾಲಿಕ ಆಶ್ರಯ ಮತ್ತು ಕೌನ್ಸೆಲಿಂಗ್ ಒದಗಿಸುತ್ತದೆ. ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಸಂತ್ರಸ್ತರಿಗೆ ಸಹಾಯ ಮಾಡಲು ಪ್ರತಿ ಜಿಲ್ಲೆಯಲ್ಲೂ ನೇಮಕಗೊಂಡಿದ್ದು, ಈ ಬಗ್ಗೆ ಮಹಿಳೆಯರಿಗೆ ಅರಿವಿರಬೇಕು ಎಂದು ತಿಳಿಸಿದರು.

ಎಂ.ಎಸ್.ವಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಮಂಜುಳಾ ಸುಬ್ರಹ್ಮಣ್ಯ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ಅನನ್ಯವಾಗಿದೆ ಎಂದರು.

ಮಹಿಳಾ ಸಮಾಜದ ಅಧ್ಯಕ್ಷೆ ಎಂ.ಕೆ.ವತ್ಸಲ, ವೈದ್ಯೆ ಡಾ. ಎಂ.ಎಸ್.ಗೀತಾ, ಉಪಾಧ್ಯಕ್ಷೆ ವಿ.ನಿರ್ಮಲ, ಕಾರ್ಯದರ್ಶಿ ಬಿ.ಎ.ಗಿರಿಜ, ಸಹ ಕಾರ್ಯದರ್ಶಿ ಎಸ್.ವೀಣಾ, ಖಜಾಂಚಿ ಬಿ.ಸಿ.ಕವಿತಾ, ನಿರ್ದೇಶಕರಾದ ಕೆ.ಜೆ.ಕವಿತ, ಎಂ.ಉಮಾದೇವಿ, ಕೆ.ಎಲ್.ಮಮತ, ಕೆ.ವನಿತ, ಆರ್.ಕವಿತ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-15-1294078473

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.