ದೊಡ್ಡಬಳ್ಳಾಪುರ: ರಾಷ್ಟ್ರೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಉದಯ್ ಬಾನು ಚಿಬ್ ಅವರ ಬಂಧನ ಖಂಡಿಸಿ ನಗರದಲ್ಲಿ ಬುಧವಾರ ರಾತ್ರಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸಿದ್ದಲಿಂಗಯ್ಯ ವೃತ್ತದಲ್ಲಿ ಬಿಜೆಪಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟೇಲ್, ತಾಲ್ಲೂಕು ಅಧ್ಯಕ್ಷ ಮಲ್ಲೊಹಳ್ಳಿ ಪುನೀತ್ಗೌಡ ಮಾತನಾಡಿ, ದೇಶದ ಸಂವಿಧಾನ ಭಾರತೀಯ ನಾಗರೀಕರಿಗೆ ನೀಡಿರುವ ಹಕ್ಕಿನಡಿಯೇ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆದರೂ ಅವರನ್ನು ಬಿಜೆಪಿ ಸರ್ಕಾರ ಬಂಧಿಸಿರುವುದು ಖಂಡನೀಯ. ಇದು ಬಿಜೆಪಿಯ ದುಂಡಾವರ್ತನೆಗೆ ನಿದರ್ಶನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಪ್ಸ್ಟೈನ್ ಫೈಲ್ಸ್ನಲ್ಲಿ ಹೆಸರಿರುವ ಪ್ರಧಾನಿ ನರೇಂದ್ರ ಮೋದಿ ದೇಶದ ಘನತೆ ಕುಗ್ಗಿಸಿದ್ದಾರೆ. ದೇಶದ ರೈತರ ಹಿತಾಸಕ್ತಿ ಬಲಿಕೊಟ್ಟು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎದುರು ಮಂಡಿಯೂರಿದ್ದಾರೆ. ಅವರ ಬಳಿ ಇದ್ಯಾವುದಕ್ಕೂ ಉತ್ತರವಿಲ್ಲ. ಇದೀಗ ಪ್ರತಿಭಟನೆ ನಡೆಸಿದ್ದಕ್ಕಾಗಿ ಬಂಧಿಸಿರುವ ಚಿಬ್ ಅವರನ್ನು ಬಿಡುಗಡೆ ಮಾಡದಿದ್ದರೆ ದೇಶದಾದ್ಯಂತ ಪ್ರತಿಭಟನೆಗಳು ನಡೆಯಲಿವೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಬೆಳ್ಳಿನಾಗೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ್ಗೌಡ, ಯಶ್ವಂತ್ ಆರಾಧ್ಯ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನಿರ್ದೇಶಕ ಅಂಜನಮೂರ್ತಿ, ದೊಡ್ಡಬಳ್ಳಾಪುರ ನಗರ ಯುವ ಬ್ಲಾಕ್ ಅಧ್ಯಕ್ಷ ಭರತ್ಶರ್ಮ, ನಗರಸಭಾ ಸದಸ್ಯ ಅಲ್ತಾಫ್, ಮಂಜುನಾಥ್, ಆನಂದ್, ಶಿವಕುಮಾರ್, ನಗರಸಭಾ ಮಾಜಿ ಸದಸ್ಯ ಫಯಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.