ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರಸಭೆ ‘ಕೈ’ ವಶಕ್ಕೆ ಸಲಹೆ

ಕಾರ್ಯಕರ್ತರಿಗೆ ಶಾಸಕ ವೆಂಕಟರಮಣಯ್ಯ ಕಿವಿಮಾತು
Last Updated 8 ಏಪ್ರಿಲ್ 2021, 2:40 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ:ನಗರಸಭಾ ಸದಸ್ಯರ ಅಧಿಕಾರಾವಧಿ ಮುಕ್ತಾಯವಾಗಿ ಎರಡು ವರ್ಷಗಳ ನಂತರ ವಾರ್ಡ್‌ಗಳ ಮೀಸಲಾತಿ ಪಟ್ಟಿ ಪ್ರಕಟವಾಗಿದೆ. ಒಂದೆರಡು ದಿನಗಳಲ್ಲೇ ಚುನಾವಣಾ ದಿನಾಂಕವೂ ‌ಘೋಷಣೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಬುಧವಾರ ಕಾಂಗ್ರೆಸ್‌ ಪಕ್ಷದಿಂದ ನಗರಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳ ಸಭೆ ಪ್ರವಾಸಿ ಮಂದಿರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷೆವಹಿಸಿದ್ದ ಶಾಸಕ ಟಿ. ವೆಂಕಟರಮಣಯ್ಯ, ‘ಈ ಬಾರಿ ನಗರಸಭೆಯಲ್ಲಿ ಸ್ಪಷ್ಟ ಬಹುತದೊಂದಿಗೆ ಉತ್ತಮ ಆಡಳಿತ ನಡೆಸುವ ಮೂಲಕ ನಗರವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕು. ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸುವ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ. ಪಕ್ಷದ ಮುಖಂಡರು ಯಾರನ್ನೇ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದರು ಸಹ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು’ ಎಂದರು.

ಸಭೆಯಲ್ಲಿ ಕೆಪಿಸಿಸಿ ಸದಸ್ಯ ಜಿ. ಲಕ್ಷ್ಮೀಪತಿ, ತಾಲ್ಲೂಕು ಪಂಚಾಯಿತಿ ಸದಸ್ಯ ಎಚ್‌.ವಿ. ಶ್ರೀವತ್ಸ, ಹಿರಿಯ ಕಾಂಗ್ರೆಸ್ ಮುಖಂಡ ತಿ. ರಂಗರಾಜು, ಕೆ.ಪಿ. ಜಗನ್ನಾಥ್, ಎಸ್‌.ಜಿ. ಸೋಮರುದ್ರಶರ್ಮ, ಬಿ.ಜಿ. ಹೇಮಂತರಾಜ್, ಎನ್‌. ಕೊಟ್ರೇಶ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇವತಿ ಅನಂತರಾಮ್, ನಗರ ಘಟಕದ ಅಧ್ಯಕ್ಷೆ ಪ್ರಭಾ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬೈರೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆದಿತ್ಯ ನಾಗೇಶ್, ಕಿಸಾನ್ ರಾಜ್ಯ ಘಟಕದ ಕಾರ್ಯದರ್ಶಿ ಕುಮುದಾ, ನಗರದ ಘಟಕದ ಪ್ರಭಾರ ಅಧ್ಯಕ್ಷ ಆಂಜನಮೂರ್ತಿ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಮುಂಚೂಣಿ ಘಟಕದ ಮುಖಂಡರಾದ ಬಿ. ಮುನಿರಾಜು, ಭೀಮಣ್ಣ, ಪು. ಮಹೇಶ್, ಶ್ರೀನಗರ ಬಷೀರ್, ಅಶ್ವಥ್‌ರೆಡ್ಡಿ, ಮಧುಸೂದನ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT