ದೊಡ್ಡಬಳ್ಳಾಪುರ: ತಾಲ್ಲೂಕಿನ ನೆಲಮಂಗಲ ರಸ್ತೆಯ ಚನ್ನಾದೇವಿ ಅಗ್ರಹಾರ ರಸ್ತೆಯಲ್ಲಿ ಶುಕ್ರವಾರ ಬೆಳಗಿನಜಾವ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ನೆಲಮಂಗಲ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ಹಾಗೂ ದೊಡ್ಡಬಳ್ಳಾಪುರ ಮಾರ್ಗವಾಗಿ ನೆಲಮಂಗಲ ಕಡೆಗೆ ತೆರಳುತ್ತಿದ್ದ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ನಡೆದಿದೆ. ಈ ವೇಳೆ ಕ್ಯಾಂಟರ್ ಚಾಲಕ ಇಳಿದು ಪರಾರಿಯಾಗುವಾಗ ಎದುರಿಗೆ ಬಂದ ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ನೆಲಕ್ಕೆ ಬಿದ್ದು ಗಾಯಗೊಂಡಿದ್ದಾರೆ. ಗಾಯಗೊಂಡಿದ್ದ ಬೈಕ್ ಸವಾರ ಕುಂಬಳಗುಂಟೆ ಗ್ರಾಮದ ಲಕ್ಷ್ಮಿಕಾಂತ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ದೊಡ್ಡಬೆಳವಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.