ದೊಡ್ಡಬಳ್ಳಾಪುರ: ಬೆಂಗಳೂರಿನ ವೃಷಭಾವತಿ ನಂದಿಯಿಂದ ಶುದ್ಧೀಕರಿಸಿದ ಕೊಳಚೆ ನೀರನ್ನು ತಾಲ್ಲೂಕಿನ ತೂಬಗೆರೆ ಹೋಬಳಿ ಕೆರೆಗಳಿಗೆ ಹರಿಸುವ ಯೋಜನೆಯನ್ನು ರಾಜ್ಯ ಸರ್ಕಾರ ತಕ್ಷಣವೇ ರದ್ದುಪಡಿಸಬೇಕು ಎಂದು ನವ ಕರ್ನಾಟಕ ಯುವಶಕ್ತಿ ವೇದಿಕೆ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರವು 2026–27ರ ಬಜೆಟ್ನಲ್ಲಿ ಘೋಷಿಸಿರುವ ಯೋಜನೆಯಂತೆ ಬೆಂಗಳೂರಿನ ವೃಷಭಾವತಿ ವ್ಯಾಲಿಯಿಂದ ಎರಡು ಹಂತದಲ್ಲಿ ಶುದ್ಧೀಕರಿಸಿದ 308 ಎಂಎಲ್ಡಿ ನೀರಿನಿಂದ 259 ಕೆರೆಗಳನ್ನು ತುಂಬಿಸುವ ಮೂಲ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಇದರ ಭಾಗವಾಗಿ ಗೋಪಾಲಪುರ ಕೆರೆಯಿಂದ ನೆಲಮಂಗಲ ಮತ್ತು ತಾಲ್ಲೂಕಿನ 119 ಕೆರೆಗಳಿಗೆ ನೀರು ಹರಿಸಲು ₹650 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದು ವೇದಿಕೆ ಕಾರ್ಯದರ್ಶಿ ಉದಯ ಆರಾಧ್ಯ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತೂಬಗೆರೆ ಹೋಬಳಿಯ ಕಾರ್ನಾಳ, ಲಕ್ಷ್ಮೀದೇವಿಪುರ, ತಿರುಮಗೊಂಡನಹಳ್ಳಿ, ಕುರುವಿಗೆರೆ, ತೂಬಗೆರೆ,ಗೂಳ್ಯ ನಂದಿಗುಂದ, ಮೆಳೇಕೋಟೆ, ಗಂಟಿಗಾನಹಳ್ಳಿ, ಕಂಚಿಗಾನಳ, ತಪಸೀಹಳ್ಳಿ ಕೆರೆ ಸೇರಿ ಒಟ್ಟು 19 ಕೆರೆಗಳಿಗೆ ವೃಷಭಾವತಿ ವ್ಯಾಲಿಯಿಂದ ನೀರು ಹರಿಸುವ ಪ್ರಸ್ತಾವನೆ ರೂಪಿಸಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೆ.ಸಿ. ವ್ಯಾಲಿ ಹಾಗೂ ಎಚ್.ಎನ್.ವ್ಯಾಲಿ ಯೋಜನೆಗಳ ಮೂಲಕ ಹರಿಯುತ್ತಿರುವ ಕೊಳಚೆ ನೀರಿನ ಪರಿಣಾಮ ಸ್ಥಳೀಯರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಂತರ್ಜಲದ ಗುಣಮಟ್ಟ ಹದಗೆಟ್ಟಿದ್ದು, ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ ಎಂದು ಅಲ್ಲಿನ ಜನರು ಹೇಳುತ್ತಿದ್ದಾರೆ. ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಮುಂದಾದರೆ ಪಕ್ಷಾತೀತವಾಗಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ನವ ಕರ್ನಾಟಕ ಯುವಶಕ್ತಿ ವೇದಿಕೆ ಅಧ್ಯಕ್ಷ ಹಳ್ಳಿರೈತ ಅಂಬರೀಶ್, ತೂಬಗೆರೆ ಹೋಬಳಿಯ ಜನರಿಗೆ ಎತ್ತಿನಹೊಳೆ ಯೋಜನೆಯ ನೀರು ಬೇಕಾಗಿದೆ. ವೃಷಭಾವತಿ ಕೊಳಚೆ ನೀರು ಅಗತ್ಯವಿಲ್ಲ. ಈ ನೀರನ್ನು ನೀಡುವಂತೆ ಸ್ಥಳೀಯರು ಯಾರೂ ಕೇಳಿಕೊಂಡಿಲ್ಲ ಎಂದು ಹೇಳಿದರು.

ಕೊಳಚೆ ನೀರನ್ನು ಹರಿಸಿದರೆ ಮುಂದಿನ ದಿನಗಳಲ್ಲಿ ಎರಡು ನಗರಗಳ ಕುಡಿಯುವ ನೀರಿನ ಸಮಸ್ಯೆಗೆ ದೊಡ್ಡ ಹೊಡೆತ ಬೀಳುವ ಸಾಧ್ಯತೆ ಇದೆ. ದೊಡ್ಡಬಳ್ಳಾಪುರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಜನರ ಬೆಂಬಲ ಪಡೆದು ರಾಜ್ಯಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಪದಾಧಿಕಾರಿಗಳು ಹಾಗೂ ಮುಖಂಡರಾದ ಹರೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.