ದೊಡ್ಡಬಳ್ಳಾಪುರ:ವೃದ್ಧಾಪ್ಯ ವೇತನ, ಪಿಂಚಣಿ ನೀಡಲು ಸರ್ಕಾರದ ಖಜಾನೆಯಲ್ಲಿ ಹಣ ಇಲ್ಲದ ಸ್ಥಿತಿಯಲ್ಲಿ ಜಾತಿಗೊಂದು ನಿಗಮ ರಚನೆಯ ಅಗತ್ಯವಾದರೂ ಏನಿತ್ತು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಗರದಲ್ಲಿ ಶನಿವಾರ ಆಯೋಜಿಸಿದ್ದ ನೇಕಾರರ ಚಿಂತನಾ ಸಭೆಯಲ್ಲಿ ಮಾತನಾಡಿದ ಅವರು,ಬೊಕ್ಕಸ ಖಾಲಿಯಾದ ಕಾರಣ ಸರ್ಕಾರ ₹90 ಸಾವಿರ ಕೋಟಿ ಸಾಲ ಮಾಡಲು ಹೊರಟಿದೆ ಎಂದು ಲೇವಡಿ ಮಾಡಿದರು.

‘ಲಾಕ್ಡೌನ್ ನಂತರ ರಾಜ್ಯದಲ್ಲಿ 14 ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರ ಇದುವರೆಗೂ ಯಾರೊಬ್ಬರಿಗೂ ಪರಿಹಾರವ ನೀಡಿಲ್ಲ.ಕೊರೊನಾ ಸಂಕಷ್ಟದ ಸಮಯದಲ್ಲಿ ಸರ್ಕಾರ ಘೋಷಿಸಿದ ಪ್ಯಾಕೆಜ್ ಭರವಸೆಯಾಗಿಯೇ ಉಳಿದಿವೆ ಎನ್ನುವುದು ನೇಕಾರರ ಕುಟುಂಬಗಳನ್ನು ಭೇಟಿ ಮಾಡಿದ ನಂತರ ಸಾಬೀತಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.