ದೇವನಹಳ್ಳಿಯಲ್ಲಿ ನಾಯಿಗಳ ಹಾವಳಿ: ಸಾರ್ವಜನಿಕರಲ್ಲಿ ಆತಂಕ

ದೇವನಹಳ್ಳಿ: ರಸ್ತೆಯಲ್ಲಿ ಸಂಚರಿಸುತ್ತಿರುವ ಸಾರ್ವಜನಿಕರ ಮೇಲೆ ಸಾಕು ನಾಯಿಗಳು ದಾಳಿ ಮಾಡುತ್ತಿದ್ದು, ಇದರಿಂದ ಹಲವು ಮಂದಿ ಗಾಯಗೊಂಡಿದ್ದಾರೆ.
ಪಟ್ಟಣದ 23ನೇ ವಾರ್ಡ್ನಲ್ಲಿ ಸಾಕು ನಾಯಿಗಳನ್ನು ಮನೆ ಆವರಣದಲ್ಲಿ ಕಟ್ಟಿಹಾಕುವುದರ ಬದಲಿಗೆ ಬೀದಿಗೆ ಬಿಟ್ಟಿರುವ ಕಾರಣ ರಸ್ತೆಯಲ್ಲಿ ಸಂಚರಿಸುವ ಜನರ ಮೇಲೆ ಏಕಾಏಕಿ ದಾಳಿ ಮಾಡುತ್ತಿವೆ.
ಸಾರ್ವಜನಿಕರು ಬೆಳಿಗ್ಗೆ ಹಾಗೂ ಸಂಜೆ ವೇಳೆ ವಾಯುವಿಹಾರಕ್ಕೆ ತೆರಳುವಾಗ ರಸ್ತೆಗೆ ಬರುವ ನಾಯಿಗಳು ಜನರ ಮೇಲೆ ದಾಳಿ ನಡೆಸುತ್ತಿವೆ. ಇದರಿಂದ ತಪ್ಪಿಸಿಕೊಳ್ಳಲಾಗದ ಜನರು ಭಯಭೀತರಾಗಿ ಓಡುವಾಗ ಹಿಂಬಾಲಿಸಿ ಕಚ್ಚುತ್ತಿವೆ. ಮಕ್ಕಳು ಸೇರಿದಂತೆ 10ಕ್ಕೂ ಹೆಚ್ಚು ಮಂದಿಯನ್ನು ಕಚ್ಚಿ ಗಾಯಗೊಳಿಸುತ್ತಿರುವ ನಾಯಿಗಳನ್ನು ಪುರಸಭೆಯವರು ಹಿಡಿದು ಊರಿನಿಂದ ಹೊರಗೆ ಬಿಡಬೇಕು. ಮಾಲೀಕರಿಗೆ ನೋಟಿಸ್ ಜಾರಿ ಮಾಡಿ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವಾಯುವಿಹಾರ ಮುಗಿಸಿ ವಾಪಸು ಬರುವಾಗ ನಾಯಿಗಳು ಅಟ್ಟಾಡಿಸಿಕೊಂಡು ಬಂದು ಕಚ್ಚಿ ಗಾಯಗೊಳಿಸಿವೆ. ತಪ್ಪಿಸಿಕೊಳ್ಳಲು ಹೋಗಿ ಕೈ ಮತ್ತು ಕಾಲಿಗೆ ಪೆಟ್ಟಾಗಿದೆ. ಮಾಲೀಕರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ರಮೇಶ್ ದೂರಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.