ಪೊಲೀಸ್ ಠಾಣೆಯಲ್ಲಿ ಸಮಾಲೋಚನೆ
ಆನೇಕಲ್ ಪೊಲೀಸ್ ಉಪವಿಭಾಗ ವ್ಯಾಪ್ತಿಯಲ್ಲಿ ಕಳೆದ ಐದಾರು ತಿಂಗಳಿಂದ ಪತಿ ತನ್ನ ಪತ್ನಿಯನ್ನೇ ಹತ್ಯೆ ಮಾಡಿದ ಏಳು ಪ್ರಕರಣ ದಾಖಲಾಗಿವೆ. ಈ ಪೈಕಿ ಬಹುತೇಕ ಪ್ರಕರಣಗಳಲ್ಲಿ ವಲಸಿಗರೇ ಹೆಚ್ಚಾಗಿದ್ದಾರೆ. ವಲಸಿಗರ ಚಲನವಲನಗಳ ಮೇಲೆ ಆನೇಕಲ್ ಪೊಲೀಸರು ಹದ್ದಿನ ಕಣ್ಣಿಟ್ಟಿದೆ. ಮಹಿಳೆಯರು ತಮ್ಮ ಸಮಸ್ಯೆಯ ಆರಂಭದಲ್ಲಿಯೇ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಅವರನ್ನು ಆಪ್ತ ಸಮಾಲೋಚನೆ ನಡೆಸಿ ಸಮಸ್ಯೆಯ ಪರಿಹಾರಕ್ಕೆ ಪೊಲೀಸರು ಯತ್ನಿಸುತ್ತಾರೆ ಎಂದು ಆನೇಕಲ್ ಡಿವೈಎಸ್ಪಿ ಮೋಹನ್ ಕುಮಾರ್ ತಿಳಿಸಿದ್ದಾರೆ.