ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವದಂತಿಗಳಿಗೆ ಕಿವಿಗೊಡದಿರಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 6 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ನೀಡಲು ಸಿದ್ಧತೆ
Last Updated 16 ಜನವರಿ 2021, 2:45 IST
ಅಕ್ಷರ ಗಾತ್ರ

ದೇವನಹಳ್ಳಿ: ಕೋವಿಡ್ -19 ಲಸಿಕೆ ವಿತರಣೆ ಸಂಬಂಧಿಸಿದಂತೆ ಜಿಲ್ಲೆಯ ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಸೇರಿದಂತೆ ಒಟ್ಟು 6 ಕೋವಿಡ್ ಲಸಿಕಾ ಕೇಂದ್ರಗಳನ್ನು ತೆರೆ
ಯಲಾಗಿದೆ. ಜಿಲ್ಲೆಯಾದ್ಯಂತ ಲಸಿಕೆ ವಿತರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ದೇವನಹಳ್ಳಿ ಜಿಲ್ಲಾಡಳಿತ ಭವನ ದಲ್ಲಿ ಕೋವಿಡ್-19 ಲಸಿಕೆ ವಿತರಣೆ ಕಾರ್ಯಕ್ರಮಕ್ಕಾಗಿ ಕೈಗೊಳ್ಳಲಾದ ಅಗತ್ಯ ಸಿದ್ಧತೆ ಕುರಿತಂತೆ ಮಾಹಿತಿ ನೀಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನವರಿ16 ರಂದು ಬೆಳಗ್ಗೆ10.30ಕ್ಕೆ ರಾಷ್ಟ್ರಮಟ್ಟದಲ್ಲಿ ಕೋವಿಡ್ ಲಸಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದಲ್ಲಿ ದೇವನ
ಹಳ್ಳಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ್ ಚಾಲನೆ ನೀಡಲಿದ್ದಾರೆ ಎಂದರು.

ಜ.16ರಿಂದ ಕೋವಿಡ್ ಲಸಿಕೆ ವಿತರಣೆ ಆರಂಭವಾಗಲಿದೆ. ಕೋವಿಡ್-19 ಲಸಿಕೆಗಾಗಿ ಆರೋಗ್ಯ ಕಾರ್ಯಕರ್ತರು, ಕೊರೊನಾ ವಾರಿಯರ್ಸ್‌ ಸೇರಿದಂತೆ 12 ಸಾವಿರ ಜನರನ್ನು ನೋಂದಣಿ ಮಾಡಿಕೊಂಡಿದ್ದಾರೆ. ಮೊದಲ ಹಂತದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 5500 ಲಸಿಕೆ ಸರಬರಾಜು ಆಗಿದೆ ಎಂದು ಮಾಹಿತಿ
ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹಾಗೂ ಆಯಾ ತಾಲ್ಲೂಕಿನ ಜನಪ್ರತಿನಿಧಿಗಳು ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಯಶಸ್ವಿಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಚುನಾವಣಾ ಮಾದರಿಯಲ್ಲಿ ಬೂತ್ ಮಟ್ಟದಲ್ಲಿ ಲಸಿಕೆ ನೋಂದಣಿಯಾದವರಿಗೆ ಮಾತ್ರ ನೀಡಲಾಗುವುದು. ಜನವರಿ 16ರಂದು ಕೊರೊನಾ ವಾರಿಯರ್ಸ್‌ಗಳಾದ ಆರೋಗ್ಯ ಕಾರ್ಯ ಕರ್ತರಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುವುದು ಎಂದರು. ಸಾರ್ವಜನಿಕರು ಯಾರು ಕೂಡ ಗೊಂದಲಕ್ಕೆ ಒಳಗಾಗದೆ, ವದಂತಿಗಳಿಗೆ ಕಿವಿಗೊಡದೆ ಸಹಕರಿಸಲು ಕೋರಿದರು. ಲಸಿಕೆ ವಿತರಣೆಗೆ ಎಲ್ಲ ರೀತಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಲಸಿಕೆ ಪಡೆದವರ ಅವಲೋಕನಕ್ಕಾಗಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ ಎಂದರು.

ಲಸಿಕಾ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಆರೋಗ್ಯ ಇಲಾಖೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಕೈಗೊಂಡಿದೆ. ಲಸಿಕೆಯನ್ನು ಲಸಿಕಾ ಕೇಂದ್ರಗಳಿಗೆ ಸುರಕ್ಷಿತವಾಗಿ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ ಹಾಗೂ ಜಿಲ್ಲೆಯಲ್ಲಿ ವಾರ್ ರೂಂ, ಕಂಟ್ರೋಲ್ ರೂಂ ಮತ್ತು ಮೀಡಿಯಾ ರೂಂ ತೆರೆಯಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಲಸಿಕೆ ನೀಡುವ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಉಂಟಾದಲ್ಲಿ ವೈದ್ಯರ ತಂಡ ಸದಾ ಸಿದ್ಧವಾಗಿರಲಿದೆ. ಕೋವಿಡ್-19 ಲಸಿಕೆ ಕುರಿತ ಯಾವುದೇ ಸಮಸ್ಯೆಗಳಿದ್ದರೂ ಕಂಟ್ರೋಲ್ ರೂಮ್‌ಗೆ ಕರೆ ಮಾಡಬಹುದು ಹಾಗೂ ಹಾಕಲಾಗಿರುವ ಲಸಿಕೆ ಅಂಕಿ-ಅಂಶಗಳನ್ನು ಒಂದೆಡೆ ಕಲೆಹಾಕಿ ರಾಜ್ಯ ಸರ್ಕಾರಕ್ಕೆ ಸಮಯಕ್ಕೆ ಸರಿಯಾಗಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT