ಶನಿವಾರ, ಫೆಬ್ರವರಿ 22, 2020
19 °C

ಬಿಜೆಪಿ ಸೇರಲಾರೆ, ವದಂತಿಗಳಿಗೆ ಕಿವಿಗೊಡದಿರಿ: ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜೆಡಿಎಸ್ ಮುಖಂಡ ಪಿಳ್ಳಮುನಿಶಾಮಪ್ಪ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಮುಖಂಡರಲ್ಲಿ ಕುತೂಹಲ ಮೂಡಿಸಿದೆ. ಇದರ ನಡುವೆ ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ಸುದ್ದಿ ಹರಡಿದೆ. ಚಿಕ್ಕಬಳ್ಳಾಪುರದಲ್ಲಿ ಡಾ.ಸುಧಾಕರ್ ಪರವಾಗಿ ಚುನಾವಣೆ ಪ್ರಚಾರದಲ್ಲೂ ಪಾಲ್ಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಜೆಡಿಎಸ್‌ನಿಂದ ಟಿಕೆಟ್‌ ನಿರಾಕರಿಸಿತ್ತು. 

ಆದರೆ,ಕುರಿತು ಪ್ರತಿಕ್ರಿಯೆ ನೀಡಿದ ಪಿಳ್ಳಮುನಿಶಾಮಪ್ಪ ‘ಹಿಂದೆ ಶಾಸಕನಾಗಿ ಎಲ್ಲ ಸಮುದಾಯಗಳ ಪ್ರೀತಿ – ವಿಶ್ವಾಸ ಗಳಿಸಿದ್ದೇನೆ. ಕೆಲಸದ ನಿಮಿತ್ತ ಡಾ.ಕೆ.ಸುಧಾಕರ್ ಅವರನ್ನು ಭೇಟಿ ಮಾಡಲು ಅವರ ಮನೆಗೆ ಹೋಗಿದ್ದು ನಿಜ. ಅವರ ಪರವಾಗಿ ಪ್ರಚಾರಕ್ಕೆ ಅಲ್ಲ. ನಾನು ಇನ್ನೂ ಜೆಡಿಎಸ್‌ನಲ್ಲೇ ಇದ್ದೇನೆ. ಯಾವ ಪಕ್ಷಕ್ಕೆ ಸೇರಬೇಕು ಎನ್ನುವ ಬಗ್ಗೆ ತೀರ್ಮಾನಿಸಿಲ್ಲ. ಕ್ಷೇತ್ರದಲ್ಲಿ ನನ್ನನ್ನು ಶಾಸಕನನ್ನಾಗಿ ಮಾಡಲು ಶ್ರಮಿಸಿದ ಮುಖಂಡರು, ಕಾರ್ಯಕರ್ತರು ಇದ್ದಾರೆ. ಅವರೊಂದಿಗೆ ಚರ್ಚಿಸಿ ನಿರ್ಧಾರಕೈಗೊಳ್ಳುತ್ತೇನೆ. ಊಹಾ‍ಪೋಹಾಗಳಿಗೆ ಯಾರೂ ಕಿವಿಗೊಡಬಾರದು’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು