ಸೋಮವಾರ, ಸೆಪ್ಟೆಂಬರ್ 27, 2021
22 °C

ಲಸಿಕೆ ಅಭಿಯಾನಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್: ಕೊರೊನಾ ಮೂರನೇ ಅಲೆ ಬಗ್ಗೆ ತಜ್ಞರು ಎಚ್ಚರಿಸಿದ್ದಾರೆ. ಕೊರೊನಾದಿಂದ ರಕ್ಷಣೆ ಪಡೆಯಲು ಲಸಿಕೆಯೇ ಅಸ್ತ್ರವಾಗಿದೆ. ಹಾಗಾಗಿ, ಪ್ರತಿಯೊಬ್ಬರು ಲಸಿಕೆ ಪಡೆಯಬೇಕು ಎಂದು ಬೆಂಗಳೂರು ನಗರ ಜಿಲ್ಲಾ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಹುಲ್ಲಹಳ್ಳಿ ಶ್ರೀನಿವಾಸ್‌ ತಿಳಿಸಿದರು.

ತಾಲ್ಲೂಕಿನ ಕಿತ್ತಗಾನಹಳ್ಳಿಯಲ್ಲಿ ಅಪೋಲೊ ಮತ್ತು ಅತ್ತಿಬೆಲೆ ಬಿಜೆಪಿ ಮಂಡಲದ ವತಿಯಿಂದ ಆಯೋಜಿಸಿದ್ದ ಲಸಿಕೆ ಅಭಿಯಾನ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೊರೊನಾದಿಂದಾಗಿ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹಾಗಾಗಿ ಈ ಕುಟುಂಬಗಳಿಗೆ ನೆರವಾಗಲು ಸರ್ಕಾರ ₹ 1 ಲಕ್ಷ ನೆರವು ಘೋಷಣೆ ಮಾಡಿದೆ. ಕಾರ್ಮಿಕರು, ಬಡ ಕುಟುಂಬಗಳು ಯಾವುದೇ ಸಮಸ್ಯೆಯಿಲ್ಲದೇ ಲಸಿಕೆ ಪಡೆದುಕೊಳ್ಳಲು ಅನುಕೂಲವಾಗಲಿ ಎಂಬ ದೃಷ್ಟಿಯಿಂದ ವಿವಿಧೆಡೆ ಲಸಿಕೆ ಅಭಿಯಾನ ನಡೆಸಲಾಗುತ್ತಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಎಸ್‌.ಆರ್‌.ಟಿ. ಅಶೋಕ್‌ ರೆಡ್ಡಿ ಮಾತನಾಡಿ, ದಾನಿಗಳ ನೆರವಿನಿಂದ ಉಚಿತವಾಗಿ ಲಸಿಕೆ ನೀಡುವ ಸಲುವಾಗಿ ಲಸಿಕೆ ಅಭಿ ಯಾನ ಪ್ರಾರಂಭಿಸಲಾಗಿದೆ ಎಂದರು.

ಪುರಸಭಾ ಉಪಾಧ್ಯಕ್ಷ ಶ್ರೀನಿವಾಸ್ ರೆಡ್ಡಿ, ಸದಸ್ಯರಾದ ಮಂಜುಳಾ, ಪ್ರದೀಪ್‌, ಸುಬ್ರಮಣಿ, ನವೀನ್‌ರೆಡ್ಡಿ, ರಘು, ಬೀರೇಶ್‌ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು