ಶುಕ್ರವಾರ, ಸೆಪ್ಟೆಂಬರ್ 24, 2021
27 °C

ದೊಡ್ಡಬಳ್ಳಾಪುರ: ಸಸಿ ನೆಡುವ ಸಪ್ತಾಹಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಸಮೀಪದ ರಾಷ್ಟ್ರೋತ್ಥಾನ ಪರಿಷತ್‌ನ ಗೋಶಾಲೆಯಲ್ಲಿ ಬೃಂದಾವನ- ಕೃಷಿ ಅರಣ್ಯ ಯೋಜನೆ ಪ್ರದೇಶದಲ್ಲಿ ಸಸಿ ನೆಡುವ ಸಪ್ತಾಹ ಆರಂಭಗೊಂಡಿದ್ದು, ಶಾಸಕ ಅರವಿಂದ ಲಿಂಬಾವಳಿ ದಂಪತಿ ಸಸಿ ನೆಡುವ ಮೂಲಕ ಸಪ್ತಾಹಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಸಸಿ ಬೆಳೆಸುವ ಸಂಕಲ್ಪದ ಸಸಿ ನೆಡುವ ಸಪ್ತಾಹ ಅತ್ಯಂತ ಶ್ಲಾಘನೀಯವಾದುದು ಎಂದು ಹೇಳಿದರು.

ಆರ್‌ಎಸ್‌ಎಸ್‌ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರ ಕಾರ್ಯವಾಹಕ ಎನ್‌. ತಿಪ್ಪೇಸ್ವಾಮಿ, ರಾಷ್ಟ್ರೋತ್ಥಾನ ಪರಿಷತ್‌ ಕಾರ್ಯದರ್ಶಿ ದಿನೇಶ್‌ ಹೆಗಡೆ, ಉಪಾಧ್ಯಕ್ಷ ದ್ವಾರಕಾನಾಥ್‌, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪುರುಷೋತ್ತಮ್‌ ಹಾಜರಿದ್ದರು.

ರಾಷ್ಟ್ರೋತ್ಥಾನ ಪರಿಷತ್‌ ವತಿಯಿಂದ ಏಳು ದಿನಗಳ ಕಾಲ ಸಪ್ತಾಹ ನಡೆಯಲಿದ್ದು, ವಿವಿಧ ಜಾತಿಯ ಆರು ಸಾವಿರ ಗಿಡಗಳನ್ನು ನೆಡುವ ಯೋಜನೆ ಹಾಕಿಕೊಳ್ಳಲಾಗಿದೆ. ಆ. 15ರವರೆಗೆ ಸಪ್ತಾಹ ನಡೆಯಲಿದೆ. ಪ್ರತಿದಿನ ಒಬ್ಬೊಬ್ಬ ಗಣ್ಯರು ಆಗಮಿಸಿ ಸಸಿ ನೆಡಲಿದ್ದಾರೆ. ಮಂಗಳವಾರ ಸಚಿವ ಎಂ.ಟಿ.ಬಿ ನಾಗರಾಜ್‌ ಸಪ್ತಾಹದಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.