ಹೊಸಕೋಟೆ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಸಾರ್ವಜನಿಕರಿಗೆ ಉಪಯೋಗವಾಗುವ ರೀತಿಯಲ್ಲಿ ನಡೆಯಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾವಹಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಸೂಚಿಸಿದರು.

ಅವರು ತಾಲ್ಲೂಕಿನ ಪೂಜೇನ ಅಗ್ರಹಾರದಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆ, ಸಿ.ಸಿ ರಸ್ತೆಗಳ ಕಾಮಗಾರಿಗೆ ಶಂಕುಸ್ಥಾಪನೆ ಹಾಗೂ ಸಮುದಾಯ ಭವನದ ಉದ್ಘಾಟನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ನಡವತ್ತಿ ಗ್ರಾಮದಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ಕಲ್ಯಾಣಿ ನಿರ್ಮಾಣ, ಪಶು ಆಸ್ಪತ್ರೆ ನಿರ್ಮಾಣ ಹಾಗೂ ಬಸ್ ನಿಲ್ದಾಣದ ಕಾಮಗಾರಿಗಳನ್ನು ವೀಕ್ಷಿಸಿದ ಶಾಸಕರು, ಈ ಭಾಗದ ಮೂರು ಊರುಗಳಲ್ಲಿ ಸುಮಾರು ₹ 70 ಲಕ್ಷ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಅವುಗಳನ್ನು ತಾವೇ ಖುದ್ದಾಗಿ ವೀಕ್ಷಿಸಿ ಅವುಗಳ ಗುಣಮಟ್ಟ ಹಾಗೂ ಕೆಲಸದ ಪ್ರಗತಿಯನ್ನು ವೀಕ್ಷಿಸಿರುವುದಾಗಿ ತಿಳಿಸಿದರು.

ಸಾರ್ವಜನಿಕರ ಉಪಯೋಗಕ್ಕಾಗಿ ಮಾಡುವ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡಬೇಕು. ಇಂತಹ ಕೆಲಸಗಳಲ್ಲಿ ಯಾವುದೇ ಲೋಪದೋಷ ನಡೆಯಬಾರದು. ಮಾಡುವ ಕೆಲಸವನ್ನು ಚೆನ್ನಾಗಿ ಮಾಡಿ ತ್ವರಿತವಾಗಿ ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಅಧ್ಯಕ್ಷ ವಿ. ಪ್ರಸಾದ್, ಉಪಾಧ್ಯಕ್ಷೆ ರೂಪಾ ಮರಿಯಪ್ಪ, ಜಿಲ್ಲಾ ಪಂಚಾಯತಿ ಸದಸ್ಯ ಕೃಷ್ಣಮೂರ್ತಿ, ಮುಖಂಡರಾದ ಹುಲ್ಲೂರು ಮಂಜುನಾಥ್, ಮುನಿಯಪ್ಪ, ಮಮತಾ, ಗೌರೀಶ್, ಚಂದ್ರಶೇಖರ್, ಸುರೇಶ್, ಗಗನ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.