ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೇಕಲ್: ಬನ್ನೇರುಘಟ್ಟ ಉದ್ಯಾನದಲ್ಲಿ ನೇಚರ್ ವಾಕ್‌ಗೆ ಚಾಲನೆ

Last Updated 4 ಅಕ್ಟೋಬರ್ 2021, 3:53 IST
ಅಕ್ಷರ ಗಾತ್ರ

ಆನೇಕಲ್:ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ವನ್ಯಜೀವಿ ಸಪ್ತಾಹದ ಅಂಗವಾಗಿ ನೇಚರ್‌ ವಾಕ್‌ (ಪರಿಸರ ನಡಿಗೆ) ಕಾರ್ಯಕ್ರಮ ಆಯೋಜಿಸಲಾಗಿತ್ತು.

ಪರಿಸರ ನಡಿಗೆಯನ್ನು ಉದ್ಘಾಟಿಸಿದ ಉದ್ಯಾನದ ಉಪ ನಿರ್ದೇಶಕ ಹರೀಶ್‌ ಮಾತನಾಡಿ‌, ಪರಿಸರ ಮತ್ತು ವನ್ಯಜೀವಿಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಮೂಲಕ ಜನರಲ್ಲಿ ಪ್ರಾಣಿಗಳ ಬಗ್ಗೆ ಪ್ರೀತಿ, ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವುದು, ತಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿನ ಪ್ರಾಣಿ, ಪಕ್ಷಿಗಳ ವೈವಿಧ್ಯತೆ ತಿಳಿಸಿಕೊಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದರು.

ಪರಿಸರ ತಜ್ಞರಾದ ಕೆ.ಸಿ. ಮಹದೇಶ್, ಗೋಪಿನಾಥ್‌, ಸೌರವ್‌ ಗುಪ್ತಾ, ಮಂಜುನಾಥ್‌ ಓಲೇಕಾರ್, ಬಂಗಾರುಸ್ವಾಮಿ ಅವರು ಪರಿಸರ ನಡಿಗೆಯಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರಿಗೆ ಪರಿಸರದಲ್ಲಿನ ಗಿಡ, ಮರಗಳು, ಪ್ರಾಣಿ, ಪಕ್ಷಿಗಳ ಬಗ್ಗೆ ತಿಳಿಸಿಕೊಟ್ಟರು.

‘ಬೆಳಿಗ್ಗೆ 6.30ಕ್ಕೆ ಪ್ರಾರಂಭಗೊಂಡ ನಡಿಗೆ 9ಗಂಟೆಯವರೆಗೂ ಅರಣ್ಯದಲ್ಲಿ ನಡೆಯಿತು. ಪಾಲ್ಗೊಂಡಿದ್ದ ಸಾರ್ವಜನಿಕರು ವಿವಿಧ ವಿಚಾರಗಳ ಬಗ್ಗೆ ಮಾಹಿತಿ ಪಡೆದರು’ ಎಂದು ವಲಯ ಅರಣ್ಯಾಧಿಕಾರಿ ದಿನೇಶ್‌ ತಿಳಿಸಿದರು.

ಉದ್ಯಾನದ ಶಿಕ್ಷಣಾಧಿಕಾರಿ ಅಮಲಾ, ಆನೆ ಮೇಲ್ವಿಚಾರಕ ಸುರೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT