ಶನಿವಾರ, ಮೇ 8, 2021
17 °C

ಪಶು ಚಿಕಿತ್ಸಾಲಯ ಕಟ್ಟಡ ಕಾಮಗಾರಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ‘ಗ್ರಾಮೀಣ ಭಾಗದಲ್ಲಿನ ರೈತರ ಜೀವನಾಡಿಯಾಗಿರುವ ಹೈನುಗಾರಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಅಗತ್ಯವಾಗಿರುವ ಎಲ್ಲಾ ಸೌಲಭ್ಯಗಳನ್ನು ನೀಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡಲಾಗಿದೆ’ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ಚನ್ನರಾಯಪಟ್ಟಣ ಹೋಬಳಿ ನಲ್ಲೂರು ಗ್ರಾಮದಲ್ಲಿ ಸೋಮವಾರ ₹35 ಲಕ್ಷ ವೆಚ್ಚದಲ್ಲಿ ಪಶು ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ಮಾಡಿ ಅವರು ಮಾತನಾಡಿದರು.

‘ಬಯಲುಸೀಮೆ ಭಾಗದಲ್ಲಿನ ರೈತರ ನಿರುದ್ಯೋಗದ ಸಮಸ್ಯೆಯನ್ನು ನಿವಾರಣೆ ಮಾಡುವುದರ ಜೊತೆಗೆ, ಯುವಜನರು ಸ್ವಂತ ಕೃಷಿಯಲ್ಲಿ ತೊಡಗಿಸಿಕೊಳ್ಳಲು ನೆರವಾಗಿರುವ ಹೈನುಗಾರಿಕೆಯನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯಬೇಕಾಗಿದೆ. ಪಶುಪಾಲನಾ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪ್ರಸಾದ್ ಮಾತನಾಡಿ, ‘ಸರ್ಕಾರದಿಂದ ರೈತರಿಗಾಗಿ ಹಲವಾರು ಯೋಜನೆಗಳು, ಸೌಲಭ್ಯಗಳನ್ನು ಜಾರಿಗೊಳಿಸಲಾಗಿದೆ. ಈ ಕುರಿತು ರೈತರಿಗೆ ಅಗತ್ಯವಾಗಿರುವ ಮಾಹಿತಿಗಳನ್ನು ರವಾನೆ ಮಾಡಬೇಕಾ
ಗಿದೆ. ಮಾಹಿತಿಯ ಕೊರತೆಯಿಂದಾಗಿ ಸಾಕಷ್ಟು ಮಂದಿ ಸೌಲಭ್ಯಗಳಿಂದ ವಂಚಿತ
ರಾಗುತ್ತಿದ್ದಾರೆ. ಅಂತಹ ರೈತರಿಗೆ ಇಲಾಖೆ
ಯವರು ನೆರವಾಗಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಲಕ್ಷ್ಮೀನಾರಾಯಣಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ ಮಂಜುನಾಥ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಆನಂದ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾಲಕ್ಷ್ಮಿ ಲಲಿತೇಶ್, ಉಪಾಧ್ಯಕ್ಷೆ ಮಮತಾಕೃಷ್ಣ, ಚನ್ನರಾಯಪಟ್ಟಣ ಹೋಬಳಿ ಜೆಡಿಎಸ್ ಅಧ್ಯಕ್ಷ ಮುನಿರಾಜು, ಪಿಎಲ್‌ಡಿ ಅಧ್ಯಕ್ಷ ಮುನಿರಾಜು, ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಚೌಡಪ್ಪನಹಳ್ಳಿ ಲೋಕೇಶ್, ಚಿನ್ನಪ್ಪ, ಲಕ್ಷ್ಮಣ್‌ಗೌಡ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಜಯರಾಮಣ್ಣ, ಸಂಪಂಗಿಯಪ್ಪ, ಗಂಗವಾರ ಚೌಡಪ್ಪನಹಳ್ಳಿ ಜಯರಾಮೇಗೌಡ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಸ್.ನಾರಾಯಣಸ್ವಾಮಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು