ದೊಡ್ಡಬಳ್ಳಾಪುರ: ತಾಲ್ಲೂಕಿನ ತಿಪ್ಪಗಾನಹಳ್ಳಿ ಕೆರೆಯಲ್ಲಿ ಮೀನು ಹಿಡಿಯಲು ಗೆಳೆಯರೊಂದಿಗೆ ತೆರಳಿದ್ದ ಚಾಲಕನೊಬ್ಬ ಮುಳುಗಿದ್ದು, ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯನ್ನು ತಾಲ್ಲೂಕಿನ ಕಾರನಾಳ ಮುರುಳಿ (22) ಎಂದು ಗುರುತಿಸಲಾಗಿದೆ. ಚಾಲಕ ವೃತ್ತಿ ಮಾಡುತ್ತಿದ್ದ ಅವರು, ಮಂಗಳವಾರ ಗೆಳೆಯರು ಹಾಗೂ ಸಹೋದರನೊಂದಿಗೆ ತಿಪ್ಪಗಾನಹಳ್ಳಿ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದಾರೆ. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಇದನ್ನು ಕಂಡ ಗೆಳೆಯರು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಟ್ ಅಂಡ್ ರನ್ ಪ್ರಕರಣ: ಕೊಲೆ ಶಂಕೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣ ವೃತ್ತದ ಬಳಿ ಮಂಗಳವಾರ ಬೆಳಗ್ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಹಿಂದೂಪುರ ಮೂಲದ ಬಾಲು (40) ಎಂಬುವರು ಮೃತಪಟ್ಟಿದ್ದಾರೆ.

ಕೂಲಿ ಕಾರ್ಮಿಕನಾಗಿದ್ದು ಕೆಲಸಕ್ಕಾಗಿ ನಗರಕ್ಕೆ ಬಂದಿದ್ದ. ಈ ಕುರಿತಂತೆ ತನಿಖೆ ನಡೆಸಿದ ದೊಡ್ಡಬಳ್ಳಾಪುರ ಠಾಣೆ ಪೊಲೀಸರು, ಇದೊಂದು ಹಿಟ್ ಅಂಡ್ ರನ್ ಪ್ರಕರಣವಲ್ಲ. ಹತ್ಯೆ ನಡೆದಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.