ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡಾಕೂಟಕ್ಕೆ ಚಾಲನೆ: ನಾಯಕತ್ವ ಗುಣ ವೃದ್ಧಿಗೆ ಕ್ರೀಡೆ ಸಹಕಾರಿ

Last Updated 8 ಸೆಪ್ಟೆಂಬರ್ 2022, 7:24 IST
ಅಕ್ಷರ ಗಾತ್ರ

ಆನೇಕಲ್: ಪಟ್ಟಣದ ಹೊಸ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಬುಧವಾರಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ತಾಲ್ಲೂಕು ಮಟ್ಟದ ಕ್ರೀಡಾಕೂಟ ನಡೆಯಿತು.

ಸ್ಪರ್ಧೆಗೆ ಚಾಲನೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಜೆ.ಎಂ. ಜಯಲಕ್ಷ್ಮೀ ಮಾತನಾಡಿ, ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮತ್ತು ಕ್ರೀಡಾ ಮನೋಭಾವ ಬೆಳೆಸಲು ಉಪಯುಕ್ತವಾಗಿವೆ ಎಂದರು.

ಕ್ರೀಡಾಪಟುಗಳಿಗೆ ಸರ್ಕಾರ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಿದೆ. ಹಾಗಾಗಿ, ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿವೆ. ಇಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹೆಚ್ಚಿನ ತರಬೇತಿ, ಮಾರ್ಗದರ್ಶನ ನೀಡಿ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲೂ ವಿಜೇತರಾಗಲು ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದರು.

ಕ್ರೀಡಾಕೂಟದಲ್ಲಿ ತಾಲ್ಲೂಕಿನ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಓಟದ ಸ್ಪರ್ಧೆಗಳು, ಡಿಸ್ಕಸ್‌ ಥ್ರೋ, ಗುಂಡು ಎಸೆತ ಸೇರಿದಂತೆ ವಿವಿಧ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ
ಪಾಲ್ಗೊಂಡಿದ್ದರು.

ಶಾಸಕ ಬಿ. ಶಿವಣ್ಣ ವಿಜೇತರಿಗೆ ಬಹುಮಾನ ವಿತರಿಸಿದರು.

ದೈಹಿಕ ಶಿಕ್ಷಣಾಧಿಕಾರಿ ನೇತ್ರಾವತಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಗೋಪಾಲ್‌, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಡಿ.ಎನ್‌. ವೀರಭದ್ರಪ್ಪ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ವಿ. ಪ್ರಕಾಶ್‌, ಖಜಾಂಚಿ ನಾರಾಯಣಸ್ವಾಮಿ, ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಆರ್. ನಾರಾಯಣ್‌, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಮಂಜುನಾಥ್‌, ಖಜಾಂಚಿ ನಾಗರಾಜು, ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್‌, ಖಜಾಂಚಿ ಗೋವಿಂದರಾಜು, ಪ್ರಧಾನ ಕಾರ್ಯದರ್ಶಿ ಲಿಂಗಮೂರ್ತಿ, ಪದಾಧಿಕಾರಿಗಳಾದ ಟಿ.ವಿ. ಉಮೇಶ್, ರಾಮಕೃಷ್ಣಯ್ಯ, ರಾಜಶೇಖರ್‌, ಪ್ರೇಮಕುಮಾರಿ, ದೈಹಿಕ ಶಿಕ್ಷಣ ಶಿಕ್ಷಕರಾದ ಕೆ.ಮೂರ್ತಿ, ರುದ್ರೇಶ್‌ ಮೀನಾಕ್ಷಿ, ರಾಜಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT