ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಂಗಳಾಂತ್ಯದಲ್ಲಿ ನೀರಿಗೆ ಬರ

ಎಚ್ಚೆತ್ತುಕೊಳ್ಳಲು ಇಲಾಖೆಗೆ ಸೂಚನೆ ನೀಡಿದ ಅಧಿಕಾರಿಗಳು
Last Updated 7 ಮಾರ್ಚ್ 2021, 2:57 IST
ಅಕ್ಷರ ಗಾತ್ರ

ದೇವನಹಳ್ಳಿ: ಮಾರ್ಚ್ ಅಂತ್ಯದೊಳಗೆ ತಾಲ್ಲೂಕಿನ 93 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಎಂಜಿನಿಯರ್ ಸೋಮಶೇಖರ್ ಹೇಳಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದರು. ಪ್ರಸ್ತುತ ಆರು ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಯಿಂದ ನೀರು ಪೂರೈಕೆ ಮಾಡಲಾಗುತ್ತಿದೆ. 2020ನೇ ಸಾಲಿನಲ್ಲಿ ಕುಡಿಯುವ ನೀರಿಗಾಗಿ ಬಿಡುಗಡೆಯಾಗಿದ್ದ ₹6.56 ಕೋಟಿ ಅನುದಾನದಲ್ಲಿ 44 ಕೊಳವೆ ಬಾವಿ ಕೊರೆಯಿಸಲಾಗಿದೆ. 29ರಲ್ಲಿ ಅಂತರ್ಜಲ ಸಿಕ್ಕಿದೆ. 15 ಕೊಳವೆಬಾವಿ ವಿಫಲವಾಗಿವೆ ಎಂದು ಹೇಳಿದರು.

93 ಗ್ರಾಮಗಳಲ್ಲಿ ನೀರಿನ ಬವಣೆ ನೀಗಿಸಲು ಕನಿಷ್ಠ ₹8.85 ಕೋಟಿ ಅಂದಾಜು ಕ್ರಿಯಾಯೋಜನೆ ತಯಾರಿಸಿ ಜಿಲ್ಲಾ ಪಂಚಾಯಿತಿಗೆ ಕಳುಹಿಸಲಾಗಿದೆ. ಅನುದಾನ ತ್ವರಿತವಾಗಿ ಬಿಡುಗಡೆ ಮಾಡಿದರೆ ಮಾತ್ರ ಪರಿಹಾರ ಕಂಡು
ಕೊಳ್ಳಲು ಸಾಧ್ಯವಾಗಲಿದೆ. ಇಲ್ಲದಿದ್ದಲ್ಲಿ ಕಠಿಣ ಪರಿಸ್ಥಿತಿ ಎದುರಾಗಲಿದೆ ಎಂದು ಹೇಳಿದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ,ಈಗಾಗಲೇ ಬೇಸಿಗೆ ಆರಂಭವಾಗಿದೆ. ಕುಡಿಯುವ ನೀರಿಗೆ ಬರ ಎಂದು ನಾಲ್ಕು ತಾಲ್ಲೂಕನ್ನು ಘೋಷಿಸಿ ಹೆಚ್ಚಿನ ಅನುದಾನ ನೀಡು
ವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್ . ಅಶೋಕ್ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯ ನಾಲ್ವರು ಶಾಸಕರು ಮನವರಿಕೆ ಮಾಡಿದ್ದೇವೆ. ಮತ್ತೊಮ್ಮೆ ಒತ್ತಡ ಹೇರುವುದಾಗಿ ಅವರು
ಹೇಳಿದರು.

ವಿಜಯಪುರ ಮತ್ತು ದೇವನಹಳ್ಳಿ ಪುರಸಭೆ ಮುಖ್ಯಾಧಿಕಾರಿ ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಇರುವ ಕೊಳವೆಬಾವಿ ಮತ್ತು ಟ್ಯಾಂಕರ್ ಗಳಲ್ಲಿ ಖಾಸಗಿಯಾಗಿ ಪೂರೈಸುವ ನೀರು ಸಕಾಲದಲ್ಲಿ ಪೂರೈಕೆ ಆಗಬೇಕು. ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆಗೆ ಅವಶ್ಯವಿರುವ ಅನುದಾನದ ಕ್ರಿಯಾಯೋಜನೆ ಕಳುಹಿಸಿಕೊಡಬೇಕು ಎಂದು ಹೇಳಿದರು.

34 ಸಾವಿರ ವಿವಿಧ ಜಾತಿ ಸಸಿ ಬೆಳೆಸಲಾಗುತ್ತಿದೆ ಎಂದು ಹೇಳುವ ಅರಣ್ಯ ಇಲಾಖೆ ಪಾಲನೆಗೆ ಎಷ್ಟು ಅನುದಾನ ಬಂದಿದೆ ಎಂಬುದನ್ನು ತಿಳಿಸಬೇಕು ಶಾಸಕ ನಿಸರ್ಗ ನಾರಾಯಣಸ್ವಾಮಿ ಪ್ರಶ್ನಿಸಿದರು. ಮುಂಗಾರು ಆರಂಭಕ್ಕೂ ಮೊದಲು ಸಸಿ ಬೆಳೆಸಬೇಕು ಎಂದು ಸಲಹೆ ನೀಡಿದರು. ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವಸಂತ್ ಕುಮಾರ್, ಗ್ರೇಡ್ 2 ತಹಶೀಲ್ದಾರ್ ಉಷಾ ಹಾಗೂ ವಿವಿಧ ಲಾಖೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT