ಸಮ್ಮಿಶ್ರ ಸರ್ಕಾರದಲ್ಲಿ ಸಂವಿಧಾನದ ಆಶಯ ಈಡೇರದು: ಡಾ.ಎಚ್.ಸಿ.ಮಹದೇವಪ್ಪ

7
ದಲಿತ ಸಂಘರ್ಷ ಸಮಿತಿ ರಾಜ್ಯ ಮಟ್ಟದ ಪದಾಧಿಕಾರಿಗಳ ಅಧ್ಯಯನ ಶಿಬಿರ

ಸಮ್ಮಿಶ್ರ ಸರ್ಕಾರದಲ್ಲಿ ಸಂವಿಧಾನದ ಆಶಯ ಈಡೇರದು: ಡಾ.ಎಚ್.ಸಿ.ಮಹದೇವಪ್ಪ

Published:
Updated:
Deccan Herald

ದೊಡ್ಡಬಳ್ಳಾಪುರ: ಸಮ್ಮಿಶ್ರ ಸರ್ಕಾರಗಳು ಎಂದೂ ಸಂವಿಧಾನದ ಆಶಯಗಳಿಗೆ ತಕ್ಕಂತೆ ಆಡಳಿತ ನಡೆಸಲು ಅವಕಾಶ ನೀಡುವುದಿಲ್ಲ. ಹೀಗಾಗಿ ಅದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿಯೇ ಕೆಲಸ ಮಾಡುತ್ತದೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ಅವರು ನಗರದ ಬೆಸೆಂಟ್ ಪಾರ್ಕ್ ನಲ್ಲಿ ಭಾನುವಾರ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಮಟ್ಟದ ಪದಾಧಿಕಾರಿಗಳ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

‘ನಮ್ಮ ಜಾತಿಯ ಓಟುಗಳನ್ನು ತರಬಲ್ಲೇ ಎನ್ನುವ ಶಕ್ತಿಯಿಂದ ಸಿದ್ದರಾಮಯ್ಯ, ಕುಮಾರಸ್ವಾಮಿ, ಯಡಿಯೂರಪ್ಪ ಅಧಿಕಾರಯುತವಾಗಿ ಮಾತನಾಡುತ್ತಾರೆ. ಆದರೆ ರಾಜ್ಯದ ಯಾವುದೆ ದಲಿತ ಮುಖಂಡರಿಗೆ ಇವತ್ತು ಈ ಶಕ್ತಿ ಇಲ್ಲದಾಗಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ಜಾಗತೀಕ ಮಟ್ಟದಲ್ಲಿ ಅಂಬೇಡ್ಕರ್ ಜನ್ಮ ದಿನಚರಣೆಯನ್ನು ನಡೆಸಲು ಮುಂದಾದಾಗ ದಲಿತ ಮುಖಂಡರೇ ಅಡ್ಡಿಯಾದರು. ದಲಿತ ಸಂಘಟನೆಯನ್ನು ಇಬ್ಬಾಗ ಮಾಡಲು ಎಲ್ಲ ರಾಜಕೀಯ ಪಕ್ಷಗಳು ಮುಂದಾಗಿವೆ’ ಎಂದರು.

‘ಖಾಸಗೀಕರಣದಿಂದ ಸಂವಿಧಾನದ ಆಶಯಗಳಿಗೆ ಧಕ್ಕೆಯಾಗಲಿದೆ. ನಮ್ಮಲ್ಲಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ದೇಶದ ಸಂವಿಧಾನ ರಕ್ಷಣೆಗೆ ಎಲ್ಲ ಸಂಘಟನೆಗಳು ಒಂದಾಗಬೇಕು. ಭಾರತದ ಸಂವಿಧಾನಕ್ಕೆ ಅಪಾಯವಾದರೆ ಪ್ರಜಾಪ್ರಭುತ್ವವೇ ಬುಡಮೇಲಾಗಲಿದೆ’ ಎಂದು ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, ಅಂಬೇಡ್ಕರ್ ಬಗ್ಗೆ ಭಾವುಕರಾಗದೆ ಅಭಿಮಾನದ ಜೊತೆಗೆ ಸಂಘಟನೆ ಮೂಲಕ ಜಾತಿ ನಿವಾರಣೆಗೆ ಶ್ರಮಿಸಬೇಕು. ಮುಂದುವರಿದ ಜಾತಿಗಳು ಆತ್ಮಾವಲೋಕನದಿಂದ ನೊಂದವರ ಬಗ್ಗೆ ಪ್ರೀತಿ ಬೆಳೆಸಿಕೊಳ್ಳಬೇಕು. ಜಗತ್ತಿನ ಶ್ರೇಷ್ಠ ಸಂವಿಧಾನವನ್ನು ಕೋಮುವಾದಿಗಳು ಸುಟ್ಟಿದ್ದು ದುರ್ದೈವದ ಸಂಗತಿ. ಕೋಮುವಾದ ಬೆಳೆದಂತೆ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ ಎಂದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷ್ಮೀನಾರಾಯಣ ನಾಗವಾರ ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !