ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಇ–ಕೆವೈಸಿ ನೋಂದಣಿ ಸಮಸ್ಯೆ

Last Updated 28 ಆಗಸ್ಟ್ 2022, 3:05 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ:ಕಿಸಾನ್ ಸಮ್ಮಾನ್ ನಿಧಿಯಡಿ ಆರ್ಥಿಕ ನೆರವು ಪಡೆಯಲು ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯ. ಆದರೆ, ರೈತರ ನಿರುತ್ಸಾಹ ಹಾಗೂ ಸರ್ವರ್ ದೋಷದಿಂದ ಅಧಿಕಾರಿಗಳು ಪರದಾಡುವಂತಾಗಿದೆ.

ಸತತ ಪ್ರಚಾರ ನೀಡಿದರೂ ಇ-ಕೆವೈಸಿ ಮಾಡಿಸಲು ರೈತರು ಉತ್ಸಾಹ ತೋರದೆ ದಿನಾಂಕವನ್ನು ವಿಸ್ತರಿಸಲಾಗಿದೆ. ಅಲ್ಲದೇ, ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ಶನಿವಾರ ಮತ್ತು ಭಾನುವಾರ ಇ-ಕೆವೈಸಿ ನೋಂದಾಯಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯ ನಿರ್ವಹಿಸಲು ಅಧಿಕಾರಿಗಳು ಮುಂದಾಗಿದ್ದರು. ಆದರೆ, ಕೆಲವು ರೈತರ ಆಧಾರ್‌ಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿಲ್ಲ. ಮತ್ತೊಂದೆಡೆ ಇ-ಕೆವೈಸಿ ದೋಷದಿಂದ ಅಧಿಕಾರಿಗಳು ಇಕ್ಕಟ್ಟಿಗೆ ಸಿಲುಕಿದ್ದಾರೆ.

ಯೋಜನೆಯ ಪ್ರತಿ ಫಲಾನುಭವಿಯು ಆ. 31ರ ಒಳಗಾಗಿ ಇ-ಕೆವೈಸಿ ಮಾಡಿಸಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT