ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಜ್ಯುಕೇರ್‌ ಉದ್ಘಾಟನೆ

ಗ್ರಾಮೀಣ ಮಕ್ಕಳಿಗೂ ತಂತ್ರಜ್ಞಾನ ಶಿಕ್ಷಣ ಸಿಗಲಿ: ಶರತ್
Last Updated 20 ಅಕ್ಟೋಬರ್ 2020, 2:53 IST
ಅಕ್ಷರ ಗಾತ್ರ

ಹೊಸಕೋಟೆ: ‘ಕೊರೊನಾ ಸಂದರ್ಭದಲ್ಲಿ ಬಹಳಷ್ಟು ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಕೌಶಲ ತರಬೇತಿ ಪಡೆದರೆ ಅವರ ಮುಂದಿನ ಭವಿಷ್ಯ ಉಜ್ವಲವಾಗುತ್ತದೆ’ ಎಂದು ಶಾಸಕ ಶರತ್ ಬಚ್ಚೇಗೌಡ ಅಭಿಪ್ರಾಯಪಟ್ಟರು.

ನಗರದಲ್ಲಿ ಕರ್ನಾಟಕ ಸರ್ಕಾರದ ಕೌಶಲ ಕರ್ನಾಟಕ ತರಬೇತಿ ಕೇಂದ್ರದ ಎಜ್ಯುಕೇರ್‌ ಐಟಿಇಎಸ್ ಸಂಸ್ಥೆಯ ಶಾಖೆ ಉದ್ಘಾಟಿಸಿ ಅವರು
ಮಾತನಾಡಿದರು.

ಯಾವುದೇ ಸಂದರ್ಭದಲ್ಲಿಯೂ ಗ್ರಾಮಾಂತರದಲ್ಲಿ ಪ್ರತಿಭಾ
ಪಲಾಯನವಾಗಬಾರದು. ಹಾಗೆಯೇ ಗ್ರಾಮೀಣ ಮಕ್ಕಳು ತಂತ್ರಜ್ಞಾನ ಶಿಕ್ಷಣದಿಂದ ವಂಚಿತರಾಗಬಾರದು. ಅದಕ್ಕಾಗಿಯೇ ಎಜ್ಯುಕೇರ್‌ ಸಂಸ್ಥೆಯು ಕರ್ನಾಟಕ ಸರ್ಕಾರದ ಕೌಶಲ ತರಬೇತಿ ಕೇಂದ್ರವನ್ನು ಹೊಸಕೋಟೆಯಲ್ಲಿ ಪ್ರಾರಂಭಿಸಿದೆ. ಇದು ಗ್ರಾಮೀಣ ವಿದ್ಯಾರ್ಥಿಗಳಿಗೆ ವರದಾನವಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಗ್ರಾಮೀಣ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ಪಡೆಯುವ ಅರ್ಹತೆ ಇರುತ್ತದೆ. ಆದರೆ, ಬೆಂಗಳೂರಿನಂತಹ ನಗರಗಳಿಗೆ ಹೋಗಿ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ಸಮಸ್ಯೆ ಎದುರಾಗುತ್ತದೆ. ಇದರಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಅಂತಹ ಮಕ್ಕಳ ಪ್ರತಿಭೆ
ಅನಾವರಣವಾಗದಿದ್ದರೆ ದೇಶದ ಭವಿಷ್ಯ ಮಂಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಎಜ್ಯುಕೇರ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ರಚನಾ ಮಹೇಶ್ ಮಾತನಾಡಿ, ಸಂಸ್ಥೆಯು ಕಳೆದ 19 ವರ್ಷಗಳಿಂದ ರಾಜ್ಯದ ವಿವಿಧೆಡೆ ಕಾರ್ಯ ನಿರ್ವಹಿಸುತ್ತಿದೆ. ಸಂಸ್ಥೆಯಲ್ಲಿ ತರಬೇತಿ ಪಡೆದವರು ಈಗ ಉನ್ನತ ಹುದ್ದೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಂಸ್ಥೆಯು ಅತ್ಯಂತ ಕಡಿಮೆ ದರದಲ್ಲಿ ವಿವಿಧ ತರಬೇತಿಗಳನ್ನು ನೀಡುತ್ತಿದೆ. ಜೊತೆಗೆ ಪ್ರತಿವರ್ಷ ಉದ್ಯೋಗ ಮೇಳಗಳನ್ನು ನಡೆಸಿ ನೂರಾರು ಜನರಿಗೆ ಉದ್ಯೋಗದ ಬಗ್ಗೆ ಮಾರ್ಗದರ್ಶನ ನೀಡುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಕೇಶವಮೂರ್ತಿ, ಸಂಸ್ಥೆಯ ಸ್ಥಳೀಯ ಮುಖ್ಯಸ್ಥ ಶಾನಿಲ್ ಕೊಯಂಬರತ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT