ಭಾನುವಾರ, ಡಿಸೆಂಬರ್ 8, 2019
20 °C

ತಾಪಂ ಉಪಾಧ್ಯಕ್ಷೆಯಾಗಿ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಪದ್ಮಾವತಿ ಅಣ್ಣಯ್ಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಹರೀಶ್‍ ನಾಯಕ್ ಹಾಗೂ ತಹಶೀಲ್ದಾರ್ ಎಂ.ಕೆ. ರಮೇಶ್ ಸಮ್ಮುಖದಲ್ಲಿ ಚುನಾವಣೆ ನಡೆಯಿತು. ಪದ್ಮಾವತಿ ಅಣ್ಣಯ್ಯಪ್ಪ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ನೂತನ ಉಪಾಧ್ಯಕ್ಷೆ ಮಾತನಾಡಿ, ‘ಪಕ್ಷದ ವರಿಷ್ಠರು, ಮುಖಂಡರು ಹಾಗೂ ಕಾರ್ಯಕರ್ತರು ವಿಶ್ವಾಸವಿಟ್ಟು ಅವಿರೋಧವಾಗಿ ಆಯ್ಕೆಯಾಗಲು ಅವಕಾಶ ನೀಡಿದ್ದಾರೆ. ಪಕ್ಷಕ್ಕೆ ಉತ್ತಮ ಹೆಸರು ಬರುವ ರೀತಿಯಲ್ಲಿ ಜನಪರ ಕೆಲಸಗಳನ್ನು ಮಾಡಲಾಗುವುದು’ ಎಂದರು.

ಉಪಾಧ್ಯಕ್ಷೆಯನ್ನು ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಆರ್‌.ಜಿ. ವೆಂಕಟಾಚಲಯ್ಯ, ಜಿ. ಲಕ್ಷ್ಮೀಪತಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ. ಶಶಿಧರ್, ಕಾಂಗ್ರೆಸ್‌ ಗ್ರಾಮಾಂತರ ಬ್ಲಾಕ್‌ ಅಧ್ಯಕ್ಷ ಎಂ. ಬೈರೇಗೌಡ, ಕಸಬಾ ಬ್ಲಾಕ್‌ ಅಧ್ಯಕ್ಷ ವೆಂಕಟೇಶ್‌, ಮುಖಂಡರಾದ ತಿ.ರಂಗರಾಜ್‌, ರಾಜಣ್ಣ ಅಭಿನಂದಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು