ಬುಧವಾರ, ಆಗಸ್ಟ್ 10, 2022
21 °C

ಚುನಾವಣೆ ಬಹಿಷ್ಕಾರ ಹಿಂ‍‍ಪಡೆದ ಕಾಲೋನಿ ನಿವಾಸಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಕಾಲೊನಿಯಲ್ಲಿ ಮೂಲ ಸೌಲಭ್ಯ ಕಲ್ಪಿಸದೆ ಇರುವುದನ್ನು ಖಂಡಿಸಿ ತಾಲ್ಲೂಕಿನ ಪಾಲ್‌ಪಾಲ್‌ದಿನ್ನೆ ಕಾಲೊನಿ ಮತದಾರರು ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕರಿಸಿದರು. ಈ ಹಿನ್ನೆಲೆಯಲ್ಲಿ ಗುರುವಾರ ಸಂಜೆ ತಹಶೀಲ್ದಾರ್‌ ಟಿ.ಎಸ್‌.ಶಿವರಾಜ್‌ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸುವ ಮೂಲಕ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮನವಿ ಮಾಡಿದರು.

ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದ ನಂತರ ಮಾತನಾಡಿ, ಗ್ರಾಮದಲ್ಲಿನ ಸ್ವಚ್ಛತೆ, ವಿದ್ಯುತ್‌ ದೀಪ, ಸ್ಮಶಾನಕ್ಕೆ ರಸ್ತೆ ಸೇರಿದಂತೆ ವಿವಿಧ ಬೇಡಿಕೆ  ಗ್ರಾಮಸ್ಥರು ತಿಳಿಸಿದ್ದಾರೆ. ಈ ಬಗ್ಗೆ ತಕ್ಷಣ ಅಗತ್ಯ ಇರುವ ಕೆಲಸ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪಂಚಾಯಿತಿ ಚುನಾವಣೆ ನಂತರ ಮತ್ತೊಮ್ಮೆ ಗ್ರಾಮದಲ್ಲಿ ಸಭೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು. ಈ ಕುರಿತಂತೆ ಜಿಲ್ಲಾಧಿಕಾರಿ ಗಮನಕ್ಕೂ ತರಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸರ್ಕಲ್‌ ಇನ್‌ಸ್ಪೆಕ್ಟರ್‌ ಎಂ.ಬಿ.ನವೀನ್‌ಕುಮಾರ್‌ ಹಾಗೂ ಸ್ಥಳೀಯ ಕಂದಾಯ ಅಧಿಕಾರಿಗಳು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.