ಬುಧವಾರ, ಜನವರಿ 26, 2022
26 °C

ಚನ್ನರಾಯಪಟ್ಟಣ, ನಲ್ಲೂರು ಗ್ರಾಮ ಪಂಚಾಯಿತಿಗೆ ಚುನಾವಣೆ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಅವಧಿ ಮುಕ್ತಾಯವಾಗಿರುವ ಚನ್ನರಾಯಪಟ್ಟಣ ಹೋಬಳಿಯ ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿಯ 15 ಸ್ಥಾನಗಳು ಹಾಗೂ ನಲ್ಲೂರು ಗ್ರಾಮ ಪಂಚಾಯಿತಿಯ 15 ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದೆ.

ಡಿ. 13ರಂದು ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಲಿದ್ದಾರೆ. ನಾಮಪತ್ರ ಸಲ್ಲಿಸಲು ಡಿ. 17 ಕೊನೆಯ ದಿನ. ನಾಮಪತ್ರಗಳ ಪರಿಶೀಲನೆಯು ಡಿ. 18ರಂದು ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಡಿ. 20 ಅಂತಿಮ ದಿನ. ಡಿ. 27ರಂದು ಮತದಾನ ನಡೆಯಲಿದೆ. ಮರು ಮತದಾನವು ಅವಶ್ಯವಿದ್ದರೆ ಡಿ .29ರಂದು ನಡೆಯಲಿದೆ. ಡಿ. 30ರಂದು ಮತ ಎಣಿಕೆ ನಡೆಯಲಿದೆ. ಡಿ. 13 ರಿದ 30ರ ವರೆಗೆ ಚುನಾವಣೆ ನಡೆಯುವ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೀತಿಸಂಹಿತೆ ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು