ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ಮಡಿವಾಳರ ಸಂಘದ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ತಾಲ್ಲೂಕಿನ ಮುನಿಶಾಮಯ್ಯ ಅವರನ್ನು ತಾಲ್ಲೂಕು ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ಧಿ ಸಂಘದಿಂದ ನಗರದ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಲಾಯಿತು.

ನಿರ್ದೇಶಕ ಮುನಿಶಾಮಯ್ಯ ಮಾತನಾಡಿ, ಕರ್ನಾಟಕ ರಾಜ್ಯ ಮಡಿವಾಳ ಸಂಘದ ನಿರ್ದೇಶಕನಾಗಿ ಆಯ್ಕೆ ಮಾಡಿರುವುದು ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ತಾಲ್ಲೂಕಿನಲ್ಲಿ ಸಮಾಜದ ಜನತೆಗೆ ನಿಷ್ಪಕ್ಷಪಾತವಾಗಿ ಸೇವೆ ಮಾಡಿದ್ದನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಮಡಿವಾಳ ಸಮುದಾಯಕ್ಕೆ ದೊರೆಯುವ ಸವಲತ್ತುಗಳನ್ನು ಜನತೆಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಸಭೆಯಲ್ಲಿ ತಾಲ್ಲೂಕಿನ ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಡಿ.ಎಲ್. ಗಂಗಾಧರ್, ಖಜಾಂಚಿ ಶ್ರೀನಿವಾಸ್, ನಿರ್ದೇಶಕ ಮುತ್ತುರಾಜು, ಚಿಕ್ಕಪಾಪಣ್ಣ, ಮುಖಂಡರಾದ ವೈರ್ ಶಿವಕುಮಾರ್, ವೀರಂಜಿ, ಮುನಿಯಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.