ದೊಡ್ಡಬಳ್ಳಾಪುರ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ನಗರಸಭೆ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ವಿದ್ಯುತ್ ಅಪಘಾತ ಮತ್ತು ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ ನಡೆಯಿತು.

ಕೆಪಿಟಿಸಿಎಲ್ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಜಿ.ಲಕ್ಷ್ಮಣ ಮಾತನಾಡಿ, ವಿದ್ಯುತ್ ಅಪಘಾತ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದೆ. ಅಪಘಾತ ತಡೆಗಟ್ಟುವ ಸಲುವಾಗಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಕಟ್ಟಡ ವಿದ್ಯುತ್ ತಂತಿಗಳ ಕೆಳಗೆ ನಿರ್ಮಿಸಬಾರದು. ತುಂಡಾಗಿ ಬಿದ್ದ ವಿದ್ಯುತ್ ತಂತಿಗಳನ್ನು ಮುಟ್ಟಬಾರದು. ವಿದ್ಯುತ್ ಟವರ್ ಬಳಿ ಗಾಳಿಪಟ ಹಾರಿಸಬಾರದು, ವಿದ್ಯುತ್ ಕಂಬಗಳಿಗೆ ಬ್ಯಾನರ್ ಅಥವಾ ಜಾಹೀರಾತು ಫಲಕ ಕಟ್ಟಬಾರದು. ಇವುಗಳನ್ನು ಸದಾ ಎಲ್ಲರೂ ತಿಳಿದಿರಲೇ ಬೇಕಾದ ಪ್ರಾಥಮಿಕ ಹಾಗೂ ಪ್ರಮುಖ ಮಾಹಿತಿಗಳು ಎಂದರು.

ಜಾಗೃತಿ ಕಾರ್ಯಕ್ರಮವನ್ನು ನಗರಸಭೆ ಸದಸ್ಯ ಪದ್ಮನಾಭ ಉದ್ಘಾಟಿಸಿದರು. ಕೆಪಿಎಲ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಗುರುನಾಥ, ಟಿಎಲ್‌ಎಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎನ್.ನಟರಾಜು, ಕೆಐಡಿಬಿ ನೋಡಲ್ ಕೇಂದ್ರದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸುಚಿತ್ರಾಲಗುಣ, ಉಪ ಕೇಂದ್ರದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜೇಶ್,ಬೆಸ್ಕಾಂ ಸಹಾಯಕ ಎಂಜಿನಿಯರ್ ಉಮಾಶಂಕರ್,ಟಿಎಲ್‌ಎಂ ಶಾಖೆಯ ಪ್ರಭಾರ ಕಿರಿಯ ಎಂಜನೀಯರ್ ಮಲ್ಲಿಕಾರ್ಜುನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.