ಗುರುವಾರ , ಫೆಬ್ರವರಿ 2, 2023
26 °C

ಬೂತ್‌ಮಟ್ಟದಲ್ಲಿ ಬಿಜೆಪಿ ಸದೃಢಕ್ಕೆ ಒತ್ತು: ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ವಿಧಾನಸಭಾ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಅಭಿಯಾನವು ಜ. 29ರ ವರೆಗೆ ನಡೆಯಲಿದ್ದು, 292 ಬೂತ್‌ ಕಮಿಟಿ ರಚಿಸಿ ಬಿಜೆಪಿಯನ್ನು ಬಲಿಷ್ಠಗೊಳಿಸಲಾಗಿದೆ ಎಂದು ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ತಿಳಿಸಿದರು.

ಪಟ್ಟಣದ ಅಂಬೇಡ್ಕರ್‌ ಕಾಲೊನಿಯ ಮಾರಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ತಾಲ್ಲೂಕಿನಲ್ಲಿ ಎಲ್ಲಾ ಭಾಗದಲ್ಲೂ ಅಭಿಯಾನ ಪ್ರಾರಂಭಿಸಿದ್ದೇವೆ. ಸಮರ್ಪಕವಾಗಿ ಸದಸ್ಯತ್ವ ನೋಂದಣಿ ನಡೆಯುತ್ತಿದೆ ಎಂದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಕರಪತ್ರಗಳನ್ನು ಪ್ರತಿ ಮನೆಗೂ ತಲುಪಿಸುತ್ತಿದ್ದೇವೆ. ರಾಜ್ಯ ಬಿಜೆಪಿ ಸರ್ಕಾರದ ಅಭಿವೃದ್ಧಿ ಕೆಲಸಗಳ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆದಿದ್ದಾರೆ. ಇದನ್ನು ಕರಪತ್ರದ ಮೂಲಕ ಹಾಗೂ ಗೋಡೆಗಳ ಮೇಲೆ ಪಕ್ಷದ ಚಿಹ್ನೆ ಬಿಡಿಸುವ ಮೂಲಕ ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ ಎಂದು
ತಿಳಿಸಿದರು.

ಪ್ರಧಾನ ಮಂತ್ರಿ ಮೋದಿ ಎಲ್ಲಾ ವರ್ಗದವರು ಆರ್ಥಿಕವಾಗಿ ಮೇಲೆ ಬರಲು ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಶ್ರಮಿಸಬೇಕು ಎಂದರು.

ವಿಧಾನ ಪರಿಷತ್‌ ಸದಸ್ಯ ಕೇಶವ ಪ್ರಸಾದ್, ಸಮಾಜ ಸೇವಕ ಓಬದೇನಹಳ್ಳಿ ಮುನಿಯಪ್ಪ, ಮುಖಂಡರಾದ ಶ್ರೀನಿವಾಸ್, ಅನಿಲ್, ಮುನಿರಾಜು, ಪುನೀತ, ಅಭಿ, ದಾಕ್ಷಾಯಿಣಿ, ವೆಂಕಟೇಶ್, ನವೀನ್‌ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು