ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ನಿರ್ಮೂಲನೆಗೆ ಒತ್ತು: ಒಕ್ಕಲಿಗರ ಸಂಘದ ಚುನಾವಣಾ ಅಭ್ಯರ್ಥಿಗಳ ಭರವಸೆ

Last Updated 30 ನವೆಂಬರ್ 2021, 6:03 IST
ಅಕ್ಷರ ಗಾತ್ರ

ದೇವನಹಳ್ಳಿ:ರಾಜ್ಯ ಒಕ್ಕಲಿಗರ ಸಂಘದಲ್ಲಿ ಸಾಕಷ್ಟು ಬದಲಾವಣೆ ತರಬೇಕಾಗಿರುವ ಉದ್ದೇಶದಿಂದ ಈ ಬಾರಿ ಹೊಸ ಅಭ್ಯರ್ಥಿಗಳೆಲ್ಲರೂ ಸಿಂಡಿಕೇಟ್ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಕಳಂಕರಹಿತ ಅಭ್ಯರ್ಥಿಗಳಿಗೆ ಮತದಾರರು ಮತ ನೀಡಬೇಕು ಎಂದು ಒಕ್ಕಲಿಗರ ಸಂಘದ ಚುನಾವಣೆಯ ಅಭ್ಯರ್ಥಿ ಡಾ.ಆಂಜಿನಪ್ಪ ಮನವಿ ಮಾಡಿದರು.

ಪಟ್ಟಣದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರ ಪ್ರೇರಣೆಯಿಂದ ಅಸ್ತಿತ್ವ ಪಡೆದುಕೊಂಡ ಒಕ್ಕಲಿಗರ ಸಂಘವು ಸುಮಾರು ₹ 2 ಸಾವಿರ ಕೋಟಿ ಮೌಲ್ಯದ ಆಸ್ತಿ ಹೊಂದಿದೆ. ಜನರಿಗೆ ಆರೋಗ್ಯ ನೀಡುವ ಸಲುವಾಗಿ ಸಾಕಷ್ಟು ಸೇವೆ ಮಾಡುತ್ತಿದ್ದರೂ ಆಡಳಿತಾಧಿಕಾರಿ ಮೂಲಕ ನಿರ್ವಹಣೆ ಮಾಡುತ್ತಿರುವುದಕ್ಕೆ ಹಿಂದಿನ ಸಾಲಿನಲ್ಲಿ ಜನರಿಂದ ಆಯ್ಕೆಯಾಗಿರುವವರೇ ನೇರ ಹೊಣೆಗಾರರಾಗಿದ್ದಾರೆ ಎಂದು ಟೀಕಿಸಿದರು.

ಅಭ್ಯರ್ಥಿ ಪುಟ್ಟೇಗೌಡ, ಬಮೂಲ್ ನಿರ್ದೇಶಕ ಇರಿಗೇನಹಳ್ಳಿ ಶ್ರೀನಿವಾಸ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಎ.ವಿ. ನಾರಾಯಣಸ್ವಾಮಿ, ಭುವನಹಳ್ಳಿ ಮುನಿರಾಜು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT