ಮಂಗಳವಾರ, ಜನವರಿ 19, 2021
17 °C

ಭೂಮಿ ಕಳೆದುಕೊಂಡವರಿಗೆ ಉದ್ಯೋಗ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಕೈಗಾರಿಕೆ ಸ್ಥಾಪನೆಗೆ ಭೂಸ್ವಾಧೀನವಾದ ಕುಟುಂಬದವರಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗವಕಾಶ ನೀಡುವಂತೆ ಒತ್ತಾಯಿಸಿ ಮಂಗಳವಾರದಿಂದ ಕರೆ ನೀಡಲಾಗಿದ್ದ ಓಬದೇನಹಳ್ಳಿ ಕೈಗಾರಿಕಾ ಪ್ರದೇಶದ ಬಂದ್ ಪೊಲೀಸ್‌ ಇಲಾಖೆ ಹಿರಿಯ ಅಧಿಕಾರಿಗಳ ಮನವಿ ಮೇರೆಗೆ ಮುಂದೂಡಲಾಗಿದೆ.

ಓಬದೇನಹಳ್ಳಿ ಕೈಗಾರಿಕಾ ಪ್ರದೇಶದ ರೈತರ ಹೋರಾಟ ಸಮಿತಿ ನೇತೃತ್ವದಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ ಭೂಮಿ ಕೊಟ್ಟ ರೈತರ ಕುಟುಂಬಕ್ಕೆ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗ ನೀಡಲು ಸರ್ಕಾರದ ಆದೇಶವಿದ್ದರೂ ಸಹ ಪಾಲಿಸದ ಕಾರ್ಖಾನೆಗಳ ವಿರುದ್ಧ ದೂರು ದಾಖಲಿಸಿ, ಕಾನೂನು ಕ್ರಮಕೈಗೊಳ್ಳುವಂತೆ ಬೆಳಿಗ್ಗೆ 7ರಿಂದ 48 ಗಂಟೆಗಳ ಕಾಲ ಕೈಗಾರಿಕಾ ಪ್ರದೇಶವನ್ನು ಬಂದ್ ಮಾಡಲು ಸಿದ್ಧತೆ ನಡೆಸಲಾಗಿತ್ತು. ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಒಂದು ತಿಂಗಳ ಕಾಲ ಅವಕಾಶ ಕೇಳಿರುವ ಹಿನ್ನೆಲೆಯಲ್ಲಿ ಬಂದ್ ಕೈಬಿಡಲಾಗಿದೆ ಎಂದರು.

ಕೆಐಎಡಿ ಕಾರ್ಯನಿರ್ವಹಣಾಧಿಕಾರಿ ನರಸಿಂಹಮೂರ್ತಿ ಹಾಗೂ ಡಿವೈಎಎಸ್‌ಪಿ ಟಿ.ರಂಗಪ್ಪ ನೇತೃತ್ವದ ತಂಡ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿ, ಬಂದ್ ಕೈಬಿಡುವಂತೆ ಮನವಿ ಮಾಡಿದರು. ರೈತರಿಗೆ ಸಿಗಬೇಕಾದ ನ್ಯಾಯಸಮ್ಮತ ಉದ್ಯೋಗ ದೊರಕಿಸಲು ಕಾರ್ಖಾನೆ ಮಾಲೀಕರ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಸಭೆಯಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್‌ ಎಂ.ಬಿ.ನವೀನ್‌ಕುಮಾರ್‌,ಗ್ರಾಮಾಂತರ ಠಾಣೆ ಸಬ್ ಇನ್‌ಸ್ಪೆಕ್ಟರ್‌ ಮಂಜುನಾಥ್, ಕೆಐಎಡಿ ಸಹಾಯಕ ಅಧಿಕಾರಿ ಮೂರ್ತಿ, ಬಾಶೆಟ್ಟಿಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಆಂಜನೇಯ, ಓಬದೇನಹಳ್ಳಿ ಕೈಗಾರಿಕಾ ಪ್ರದೇಶದ ರೈತರ ಹೋರಾಟ ಸಮಿತಿ ಓಬದೇನಹಳ್ಳಿ ಮುನಿಯಪ್ಪ, ರಾಮಾಂಜಿನಪ್ಪ, ಮಂಜುನಾಥ್‌, ನಂದಕುಮಾರ್‌, ಚಂದ್ರಶೇಖರ್‌, ಸಂದೇಶ್, ಹನುಮಂತಗೌಡ ಮುಖಂಡರು ಇದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು