ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಸೃಜನಶೀಲತೆ ಪ್ರೋತ್ಸಾಹಿಸಿ

ತಾಲ್ಲೂಕು ಮಟ್ಟದ ಪಿಯು ಕಾಲೇಜು ಸಾಂಸ್ಕೃತಿಕ ಸ್ಪರ್ಧೆ
Last Updated 8 ನವೆಂಬರ್ 2022, 7:02 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ‘ಮಕ್ಕಳ ಸೃಜನಶೀಲ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡುವ ಕೆಲಸವನ್ನು ಶಾಲಾ, ಕಾಲೇಜು ಹಂತದಲ್ಲಿಯೇ ಶಿಕ್ಷಕರು ಮತ್ತು ಉ‍ಪನ್ಯಾಸಕರು ಮಾಡಬೇಕಿದೆ’ ಎಂದು ಶ್ರೀದೇವರಾಜ ಅರಸ್ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ. ರಾಜೇಂದ್ರ ಸಲಹೆ ನೀಡಿದರು.

ನಗರದಲ್ಲಿ ಸೋಮವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ, ಶ್ರೀದೇವರಾಜ ಅರಸ್ ಪದವಿಪೂರ್ವ ಕಾಲೇಜು ಹಾಗೂ ವಿದ್ಯಾನಿಧಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಸಹಯೋಗದಡಿ ನಡೆದ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಾಮಾಜಿಕವಾಗಿ ವಿದ್ಯಾರ್ಥಿಗಳ ಉತ್ತಮ ವ್ಯಕ್ತಿತ್ವ ಬೆಳೆಸುವ ಹೊಣೆಗಾರಿಕೆಯು ಶಿಕ್ಷಣ ಸಂಸ್ಥೆಗಳ ಮೇಲಿದೆ. ಓದಿನ ಜತೆಯಲ್ಲಿ ಮಕ್ಕಳಲ್ಲಿರುವ ಸಾಂಸ್ಕೃತಿಕ, ಕ್ರೀಡಾ ಆಸಕ್ತಿಯನ್ನೂ ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಪ್ರಭಾರ ಉಪ ನಿರ್ದೇಶಕ ಹಾಗೂ ಕೊನಘಟ್ಟ ಕಾಲೇಜಿನ ಪ್ರಾಂಶುಪಾಲ ದಯಾನಂದ್ ಮಾತನಾಡಿ, ಮಕ್ಕಳ ಸೃಜನಶೀಲ ಪ್ರತಿಭೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕಾಲೇಜು ಹಂತದಲ್ಲಿ ಈ ಬಗೆಯ ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು ಎಂದು ಆಶಿಸಿದರು.

ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಡಾ.ಸುಬ್ರಹ್ಮಣ್ಯ ಮಾತನಾಡಿ, ಪರಿಪೂರ್ಣ ಶಿಕ್ಷಣ ಮಾತ್ರ ವಿದ್ಯಾರ್ಥಿಯನ್ನು ಉತ್ತಮ ಪ್ರಜೆಯಾಗಿ ರೂಪಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ವಿದ್ಯಾನಿಧಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಂಗನಾಥ್, ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್. ಆನಂದಮೂರ್ತಿ, ಶ್ರೀದೇವರಾಜ ಅರಸ್ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಮಹಂತೇಶಪ್ಪ, ಶ್ರೀವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವೇಣುಗೋಪಾಲ್, ತಾಲ್ಲೂಕು ನೋಡಲ್ ಅಧಿಕಾರಿ ಸುಜಾತ, ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯ ಮಾನವ ಸಂಪನ್ಮೂಲ ನಿರ್ದೇಶಕ ಬಾಬುರೆಡ್ಡಿ, ಎಸ್‌ಡಿಯುಪಿಯು ಆಡಳಿತಾಧಿಕಾರಿ ರಮೇಶ್‌ಕುಮಾರ್, ಆರ್‌ಎಲ್‌ಜೆಐಟಿ ಪ್ರಾಂಶುಪಾಲ ಡಾ.ಶ್ರೀನಿವಾಸರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT