ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೇಕಲ್ | ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

Published 17 ಮೇ 2024, 9:24 IST
Last Updated 17 ಮೇ 2024, 9:24 IST
ಅಕ್ಷರ ಗಾತ್ರ

ಆನೇಕಲ್: ತಾಲ್ಲೂಕಿನ ಹಿಲೀಲಗೆಯಲ್ಲಿರುವ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ.

ಹಾಸನ ಮೂಲದ ಹರ್ಷಿತಾ (20) ಮೃತ ವಿದ್ಯಾರ್ಥಿನಿ. 

ಹಿಲೀಲಗೆಯಲ್ಲಿರುವ ಬೆಂಗಳೂರು ಕಾಲೇಜ್ ಆಫ್ ಎಂಜಿನಿಯರಿಂಗ್ ಟೆಕ್ನಾಲಜಿ ಕಾಲೇಜಿನಲ್ಲಿ ಹರ್ಷಿತಾ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದರು.

ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ವಿದ್ಯಾರ್ಥಿನಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸಹಪಾಠಿಗಳು ಆರೋಪಿಸಿದ್ದಾರೆ.

ಹರ್ಷಿತ ಸಾವು ಖಂಡಿಸಿ ವಿದ್ಯಾರ್ಥಿಗಳು ಶುಕ್ರವಾರ ಕಾಲೇಜಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಸೂರ್ಯಸಿಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT